ಚಂದ್ರವಳ್ಳಿ ನ್ಯೂಸ್, ಮೈಸೂರು:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇನ್ನಿಲ್ಲದಂತೆ ಮುಡಾ ಪ್ರಕರಣ ಕಾಡುತ್ತಿದೆ.
ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಸಿಎಂ ಮರಿಗೌಡ ಭೇಟಿ-
ಮುಡಾ ಅಧ್ಯಕ್ಷ ಕೆ.ಮರಿಗೌಡರಾಜೀನಾಮೆ ಸಲ್ಲಿಸುವುದಕ್ಕೂ ಮೊದಲು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು ಎನ್ನುವ ಮಾಹಿತಿಗಳು ಲಭ್ಯವಾಗಿದ್ದು ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೊಡುವುದು ಖಚಿತ ಎನ್ನಲಾಗಿತ್ತು.
ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿದ ಮರಿಗೌಡ, ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳ ಕೈಯಲ್ಲಿ ಮುಡಾ ಅಧ್ಯಕ್ಷರ ರಾಜೀನಾಮೆ ಪತ್ರ ಇದ್ದು ಇನ್ನಷ್ಟೇ ರಾಜೀನಾಮೆ ಅಂಗೀಕಾರ ಆಗಬೇಕಿದೆ.