ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಪ್ರಕರಣ: ರಾಷ್ಟ್ರಪತಿಗಳ ಎಂಟ್ರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಎಂಟ್ರಿಯಾಗಿದೆ.

- Advertisement - 

ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಸಂಬಂಧ ಕೆಪಿಸಿಸಿ ಮಾಧ್ಯಮ ವಿಭಾಗದ ವಕ್ತಾರ ರಮೇಶ್ ಬಾಬು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದರು.

- Advertisement - 

ಈ ದೂರಿನ ಕುರಿತು ರಾಷ್ಟ್ರಪತಿಗಳಿಂದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಷ್ಟ್ರಪತಿಗಳ ಕಾರ್ಯದರ್ಶಿ ರಾಜೇಶ್ ಅವರು ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ರಮೇಶ್ ಬಾಬು ಅವರ ದೂರಿನ ಬಗ್ಗೆ ಸೂಕ್ತ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

- Advertisement - 

  

Share This Article
error: Content is protected !!
";