ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ಉಪ-ವಿಭಾಗ, ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರ ಪೊಲೀಸ್ ವೃತ್ತಿಯಲ್ಲಿ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರದಾನ ಮಾಡಿ ಗೌರವಿಸಿದ್ದಾರೆ.
ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಪದಕ ವಿತರಣೆ ಮಾಡಿದರು.
ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ಪಡೆದ ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರನ್ನು ಬೆಂಗಳೂರು ಗ್ರಾಮಾಂತರ ಪೊಲೀಸ್ ವರ್ಗ ಅಭಿನಂದಿಸಿದೆ.

