ಜುಲೈ-21 ರಂದು ಪತ್ರಿಕಾ ದಿನಾಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
, ಚಿತ್ರದುರ್ಗ ಜಿಲ್ಲಾ ಘಟಕದಿಂದ ಜುಲೈ 21 ರಂದು ಇಲ್ಲಿನ ಪತ್ರಿಕಾ ಭವನದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕಾರ್ಯಕ್ರಮ ಉದ್ಘಾಟಿಸುವವರು. ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಶಯ ಭಾಷಣ ನೀಡಲಿದ್ದಾರೆ.

- Advertisement - 

ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ದಿನೇಶ್ ಗೌಡಿಗೆರೆ ಅಧ್ಯಕ್ಷತೆ ವಹಿಸುವವರು.
ಅತಿಥಿಗಳಾಗಿ ಶಾಸಕರಾದ ಕೆ.ಸಿ.ವೀರೇಂದ್ರ (ಪಪ್ಪಿ)
, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎಂಎಲ್ಸಿ ಕೆ.ಎಸ್. ನವೀನ್, ನವದೆಹಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಬೆಂಗಳೂರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ವಸತಿ ಸಚಿವರ ಮಾಧ್ಯಮ ಸಲಹೆಗಾರ ಲಕ್ಷ್ಮೀ ನಾರಾಯಣ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಎಂ.ಎನ್.ಅಹೋಬಳಪತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಯೋಗೀಶ, ಭಾರತೀಯ ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯ ಸಿ.ಹೆಂಜಾರಪ್ಪ ಭಾಗವಹಿಸಲಿದ್ದಾರೆ.

- Advertisement - 

ಬಿ.ವಿ.ವೈಕುಂಟರಾಜು ನವೀಕೃತ ಸಭಾಂಗಣವನ್ನು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದಾರೆ.

 

 

 

Share This Article
error: Content is protected !!
";