ಪತ್ರಿಕಾ ವಿತರಕರ ವಿಮಾ ಯೋಜನೆ ಷರತ್ತು ಸಡಿಲಿಸಲು ಒತ್ತಾಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪತ್ರಿಕಾ ವಿತರಕರ ಅಪಘಾತ ವಿಮಾ ಪರಿಹಾರ ನೀಡುವಲ್ಲಿ ನಿಬಂಧನೆಗಳ ಕೆಲ ಷರತ್ತುಗಳನ್ನು ಸಡಿಲಿಸುವಂತೆ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿ ಚರ್ಚಿಸಿದರು.

- Advertisement - 

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಾಗೂ ಕಾರ್ಮಿಕ ಸಚಿವರಿಗೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು. ಮನವಿ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜೊತೆಗೆ ಚರ್ಚಿಸಿದ ಪ್ರಭಾಕರ್ ಅವರು ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು.

- Advertisement - 

ಈ ಬಗ್ಗೆ ಪರಿಶೀಲಿಸಿ ಪತ್ರಿಕಾ ವಿತರಕರ ಒಕ್ಕೂಟ ಸೇರಿದಂತೆ ಸಮಿತಿ ರಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವ ಸಂತೋಷ್ ಲಾಡ್ ಅವರು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಐದನೇ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಯಿತು.

- Advertisement - 

 

 

Share This Article
error: Content is protected !!
";