ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿರವರು ಇದೇ 28ರಂದು ಶ್ರೀಕೃಷ್ಣನ ನಗರಿ, ಉಡುಪಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪಾಲ್ಗೊಂಡಿದ್ದರು.
ಸಭೆಯಲ್ಲಿ, ಉಡುಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕ್ಯಾಪ್ಟನ್ ಬ್ರಿಜೇಶ್, ಶಾಸಕರುಗಳಾದ ಜಿ.ಸುರೇಶ್, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್, ಹರೀಶ್ ಪೊಂಜ, ಗುರುರಾಜ ಗಂಟಿಹೊಳಿ, ಡಾ. ಧನಂಜಯ ಸರ್ಜಿ, ಮಾಜಿ ಸಚಿವ ಪಿ.ಮದ್ವಾರಾಜ್,
ಮಾಜಿ ಶಾಸಕ ಲಾಲಾಜಿ ಮೆಂಡನ್, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಕಾರ್ಯಕರ್ತರು ಭಾಗವಹಿಸಿದ್ದರು.

