ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ ಹಾಗೂ ಕೇಂದ್ರ ರೈಲ್ವೆ ಮಂಡಳಿ ಮತ್ತು ರೈಲ್ವೇ ಸಚಿವಾಲಯದ ವತಿಯಂದ 2025ನೇ ಆಗಸ್ಟ್ 10 ರಂದು ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿ,
ಮೊದಲಿಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಬೆಂಗಳೂರಿನಿಂದ ಬೆಳಗಾವಿ, ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಮೂರು ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೆ ಚಾಲನೆ ನೀಡಲಿದ್ದಾರೆ.
ನಂತರ ಆರ್. ವಿ ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಬೆಂಗಳೂರು ಮೆಟ್ರೋ 2 ರ ಹಳದಿ ಮಾರ್ಗದ ಉದ್ಘಾಟನೆ ಮಾಡಿ ಮೆಟ್ರೋ ರೈಲಿನ ಮೂಲಕ ಕೊನಪ್ಪನ ಅಗ್ರಹಾರದ ವರೆಗೆ ಪ್ರಯಾಣ ಕೈಗೊಳ್ಳಲಿರುವರು. ಎಲೆಕ್ಟ್ರಾನಿಕ್ ಸಿಟಿಯ ಐಐಐಟಿಯಲ್ಲಿ ಬಿ.ಎಂ.ಆರ್.ಸಿಲ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ಬೆಂಗಳೂರು ಮೆಟ್ರೋ ಹಂತ 3 ರ ಶಂಕುಸ್ಥಾಪನೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ ಚಂದ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಹಾಗೂ ವಿದ್ಯುತ್ ಸಚಿವ ಮನೋಹರ್ ಲಾಲ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ರೈಲ್ವೆ ಮಹಿತಿ ಮತ್ತು ಪ್ರಸಾರ,
ವಿದ್ಯುನ್ಮಾನ ಹಾಗೂ ಮಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ, ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ಹಾಗೂ ಕರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಸದ ಡಾ.ಸಿ.ಎನ್. ಮಂಜುನಾಥ್ ಸೇರಿದಂತೆ ಸಚಿವರುಗಳು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಶಾಸಕರು, ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

