ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ತೊಗರಿ ಬೆಳೆಗಾರರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭರ್ಜರಿ ಕೊಡುಗೆ! ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ತೊಗರಿ ಬೆಳೆಗಾರರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆಯಡಿ (MSP) 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಅಧಿಕೃತ ಅನುಮೋದನೆ ನೀಡಿದೆ.
ತೊಗರಿ ಬೆಳೆಗಾರರ ಸಂಕಷ್ಟಗಳನ್ನು ಮನಗಂಡು ತಕ್ಷಣ ಸ್ಪಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರಿಗೆ ಕರ್ನಾಟಕದ ತೊಗರಿ ಬೆಳೆಗಾರರ ಪರವಾಗಿ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಸಕಾಲಕ್ಕೆ ಕೇಂದ್ರದ ಗಮನವನ್ನು ಸೆಳೆಯುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಖರೀದಿ ಪ್ರಮಾಣ: 9,67,000 ಮೆಟ್ರಿಕ್ ಟನ್, MSP (2025–26): ಕ್ವಿಂಟಾಲ್‌ಗೆ 8,000 ನಾಡಿನ ಅನ್ನದಾತರ ಸಂಕಷ್ಟ ಅರಿತು ತಡ ಮಾಡದೆ ಸ್ಪಂದಿಸಿದ ಮೋದಿ ಸರ್ಕಾರದ ರೈತ ಪರ ಕಾಳಜಿ, ಬದ್ಧತೆ ಇದರಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

