74 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ
ಚಂದ್ರವಳ್ಳಿ ನ್ಯೂಸ್, ನವದೆಹಲಿ :
ಪ್ರಧಾನಮಂತ್ರಿ ನರೇಂದ್ರ ಮೋದಿಯವರು 74ನೇ ಜನ್ಮದಿನಾಚರಣೆಯ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಬಿಜೆಪಿ ನಾಯಕರು ಶುಭಾಶಯಗಳನ್ನು ಕೋರಿದ್ದಾರೆ.
ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಜಗಮೆಚ್ಚಿದ ಜನನಾಯಕ, ಭಾರತ ಕಂಡ ಹೆಮ್ಮೆಯ ಪ್ರಧಾನಿ, ದಕ್ಷ ಆಡಳಿತ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ ಜಗತ್ತೇ ಮೆಚ್ಚಿದ ವಿಶ್ವನಾಯಕನಾಗಿ, ದಣಿವರಿಯದೆ ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು ಎಂದು ಹೇಳಿ, ಕೊಂಡಾಡಿದೆ.
ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಪೋಸ್ಟ್ ಮಾಡಿ, ಆದರಣೀಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ಇನ್ನೂ ಸುದೀರ್ಘ ಕಾಲ ತಮ್ಮ ಸಾರ್ಥಕ ದೇಶಸೇವೆ ನಡೆಯುತ್ತಿರುವಂತೆ ದೇವರ ಆಶೀರ್ವಾದವಿರಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.