ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗ ಮೆಚ್ಚಿದ ವಿಶ್ವನಾಯಕರಾಗಿ, ವಿಕಸಿತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ದೇಶದ ಅಭಿವೃದ್ಧಿ ಹಾಗೂ ಜನರ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿ 11 ವರ್ಷ ಪೂರೈಸಿದೆ ಎಂದು ಬಿಜೆಪಿ ತಿಳಿಸಿದೆ.
ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ, ಔದ್ಯೋಗಿಕ, ಶೈಕ್ಷಣಿಕ, ಬಾಹ್ಯಾಕಾಶ, ವಿದೇಶಾಂಗ ಕ್ಷೇತ್ರಗಳಲ್ಲಿ ಅನೇಕ ರೀತಿಯ ಬದಲಾವಣೆಗಳನ್ನು, ಯೋಜನೆಗಳನ್ನು ತರುವ ಮೂಲಕ ಭಾರತ ಇಂದು ಅಭಿವೃದ್ಧಿ ಪಥದತ್ತ ಸಾಗಿದೆ. ಇಡೀ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಭಾರತವು ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಿದೆ.
2015 ರಲ್ಲಿ 179 ಲಕ್ಷ ಕೋಟಿ ಇದ್ದ ಭಾರತದ ಆರ್ಥಿಕತೆಯು 2024-25ರ ಆರ್ಥಿಕ ವರ್ಷದಲ್ಲಿ 365 ಲಕ್ಷ ಕೋಟಿಗೆ ಏರಿಕೆ ಕಂಡಿರುವುದು ಐಎಂಎಫ್ ವರದಿಯಲ್ಲಿ ಮೆಚ್ಚುಗೆ ದೊರೆತಿದೆ. ಪ್ರಧಾನಿ ಮೋದಿ ಅವರ ನೇತೃತ್ವದ ಭಾರತವು ಇಂದು ಜಪಾನ್ ದೇಶವನ್ನು ಹಿಂದಿಕ್ಕಿ, ಜಗತ್ತಿನ ನಾಲ್ಕನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ.
ರಾಷ್ಟ್ರವನ್ನು ಬಲಿಷ್ಠಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಬಿಜೆಪಿ ತಿಳಿಸಿದೆ.