ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಗೈರು ಹಾಜರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಟಿ. ಹರೀಶ್ ರವರಿಂದ ಹಣದ ಬೇಡಿಕೆಯನ್ನು ಇಟ್ಟು ಹಣ ಪಡೆದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

 ಪ್ರಥಮ ದರ್ಜೆ ಸಹಾಯಕ ಸದಾಶಿವಯ್ಯ ಫೋನ್ ಪೇ ಮೂಲಕ 10 ಸಾವಿರ ರೂ, ಪಡೆದಿದ್ದು, ಹಾಗೂ ಪ್ರಾಂಶುಪಾಲ ಎಂ.ಕೆ. ಪ್ರವೀಣ್ ಕುಮಾರ್ 5000 ರೂ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲ ಎಂ.ಕೆ ಪ್ರವೀಣ್ ಕುಮಾರ್ ಮತ್ತು ಪ್ರಥಮ ದರ್ಜೆಯ ಸಹಾಯಕ ಸದಾಶಿವಯ್ಯ ರವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";