ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಭಯೋತ್ಪಾದಕರಿಗೆ, ಅಪರಾಧಿಗಳಿಗೂ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವುದು ಆಘಾತಕಾರಿ ಮತ್ತು ಖಂಡನೀಯ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ.
ಸಮಾಜಘಾತುಕರಿಗೆ ಪರಪ್ಪನ ಅಗ್ರಹಾರ ಜೈಲು ರೆಸಾರ್ಟ್‌ಆಗಿದ್ದು, ಅಪರಾಧಿಗಳ ಮನ ಪರಿವರ್ತನೆಯ ಕೇಂದ್ರಗಳಾಗಬೇಕಿರುವ ಕಾರಾಗೃಹಗಳಲ್ಲಿ ಅರಮನೆಗಳಲ್ಲಿನ ರಾಜ ಮಾರ್ಯಾದೆ ದೊರೆಯುತ್ತಿದೆ!
ಕಾಂಗ್ರೆಸ್‌ಸರ್ಕಾರದ ಅರಾಜಕತೆ, ಅಸಮರ್ಥ ಸಿಎಂ ಸಿದ್ದರಾಮಯ್ಯ, ನಿಷ್ಪ್ರಯೋಜಕ ಗೃಹಮಂತ್ರಿ ಡಾ.ಜಿ ಪರಮೇಶ್ವರ ಅವರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

