ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ

News Desk

ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶದ ಅತಿ ಸೂಕ್ಷ್ಮ ವಿಚಾರ, ಗೌಪ್ಯ ವಿಚಾರಗಳು ಸೇರಿದಂತೆ ವಿದೇಶಾಂಗ ನೀತಿಯಿಂದ ಹಿಡಿದು ಮಿಲಿಟರಿ ತಂತ್ರಗಾರಿಕೆವರೆಗೆ ಉದ್ದುದ್ದ ಬೊಗಳೆ ಭಾಷಣ ಬಿಗಿಯುವ ಪ್ರಿಯಾಂಕ್ ಖರ್ಗೆ ಅವರೇ, ತಮಗೆ ಕಲ್ಯಾಣ ಕರ್ನಾಟಕದ ಹಳ್ಳಿಗಳ ಜನ ಬಸ್ಸಿಲ್ಲದೆ ದುಪ್ಪಟ್ಟು ಬೆಲೆ ತೆತ್ತು ಸ್ವಂತ ಗಾಡಿ, ಟಂಟಂ, ಜೀಪಿನಲ್ಲಿ ಪ್ರಯಾಣ ಮಾಡುವುದು ತಮಗೆ ಕಾಣುತ್ತಿಲ್ಲವೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಕಲ್ಯಾಣ ಕರ್ನಾಟಕದ 38 ಹಳ್ಳಿಗಳಿಗೆ ಬಸ್ ಸೌಕರ್ಯವೇ ಇಲ್ಲ. ಮಹಿಳೆಯರು ಸೇರಿದಂತೆ ಆ ಭಾಗದ ಜನರಿಗೆ ಯಾವುದೇ ಪ್ರಯೋಜನ ದೊರೆಯುತ್ತಿಲ್ಲ ಅಶೋಕ್ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement - 

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಕಲ್ಯಾಣ ಕರ್ನಾಟಕದ 38 ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಯಾವುದೇ ಪ್ರಯೋಜನವಿಲ್ಲ. ಯಾಕೆ ಪ್ರಯೋಜನವಿಲ್ಲ ಅಂದರೆ 38 ಗ್ರಾಮಗಳಿಗೆ ಬಸ್ಸೇ ಇಲ್ಲ. ಬಸ್ಸು ಯಾಕಿಲ್ಲ ಅಂದರೆ ಅಲ್ಲಿ ಯೋಗ್ಯ ರಸ್ತೆಯೇ ಇಲ್ಲ. ಕಲ್ಯಾಣ ಕರ್ನಾಟಕದ ಜನರ ಮತ ಪಡೆದು, ಅಧಿಕಾರ ಅನುಭವಿಸಿ ತಮ್ಮ ಕುಟುಂಬದ ಕಲ್ಯಾಣ ಮಾಡಿಕೊಂಡಿರುವುದೇ ನಿಮ್ಮ ಏಕೈಕ ಸಾಧನೆ ಎಂದು ನಿಪಕ್ಷ ನಾಯಕ ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಆರ್​ಎಸ್​ಎಸ್ ಕುರಿತು ವಿವಾದಾತ್ಮಕ ಹೇಳಿಕೆ ಸೇರಿದಂತೆ ಇತರೆ ಹೇಳಿಕೆಗಳನ್ನು ಕೊಟ್ಟು ನಿಮ್ಮ ವೈಫಲ್ಯಗಳನ್ನು ಮರೆಮಾಚಬಹುದು, ಜನರನ್ನು ಯಾಮಾರಿಸಬಹುದು ಎಂದು ಕನಸು ಕಾಣಬೇಡಿ. ಕಲ್ಯಾಣ ಕರ್ನಾಟಕದ ಜನ ಖರ್ಗೆ ಕುಟುಂಬವನ್ನ ಮತ್ತು ಕಾಂಗ್ರೆಸ್ ಪಕ್ಷವನ್ನ ನಿಷೇಧ ಮಾಡುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

- Advertisement - 

ಗುಂಡಿಯಲ್ಲಿ ಸಂಚರಿಸಬೇಕೆ: ಅಶೋಕ್
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ
, ಆರ್‌ಎಸ್‌ಎಸ್ ಸಂಸ್ಥೆಯನ್ನು ಟೀಕಿಸುವ ಜವಾಬ್ದಾರಿಯುತ ಖಾತೆ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ. ಈಗಲಾದರೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ​ಗೆ ಆಗಮಿಸುವ ಜಾಗತಿಕ ಪ್ರತಿನಿಧಿಗಳು ಪ್ರಯಾಣಿಸಬೇಕಾದ ಗುಂಡಿ ಬಿದ್ದ, ಹೊಂಡ ತುಂಬಿದ, ಕಸದಿಂದ ತುಂಬಿ ತುಳುಕುವ ರಸ್ತೆಗಳನ್ನು ಸರಿಪಡಿಸಲು ಮನವಿ ಮಾಡುವರೇ ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರು ನಗರಕ್ಕೆ ಬೆಂಗಳೂರು ಟೆಕ್ ಶೃಂಗಸಭೆ ಆಯೋಜನೆಯಿಂದ ಮತ್ತೊಂದು ಜಾಗತಿಕ ಮುಜುಗರವಾಗುವುದಿಲ್ಲ ಎಂದು ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ನೀಡುತ್ತದೆಯೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.
ಕಳೆದ
2.5 ವರ್ಷಗಳಿಂದ ಈ ಕಾಂಗ್ರೆಸ್ ನಾಲಾಯಕ್ ಸರ್ಕಾರ ಬೆಂಗಳೂರಿನ ಮೂಲಸೌಕರ್ಯ ಹಾಳು ಮಾಡಿದೆ. ಟ್ರಾಫಿಕ್ ಸಮಸ್ಯೆ ಉಲ್ಬಣಗೊಳಿಸಿದೆ.

ಹೂಡಿಕೆದಾರ ಮತ್ತು ಸ್ಟಾರ್ಟ್‌ಅಪ್‌ಗಳನ್ನು ಹೆದರಿಸಿ, ಬೆದರಿಸಿ, ಅವಮಾನ ಮಾಡಿ ಬೆಂಗಳೂರಿನ ವರ್ಚಸ್ಸಿಗೆ, ಜಾಗತಿಕ ಬ್ರ್ಯಾಂಡ್‌ಗೆ ಧಕ್ಕೆ ತಂದಿದೆ. ಕಾಂಗ್ರೆಸ್ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು, ಬೆಂಗಳೂರು ಟೆಕ್ ಸಮ್ಮಿಟ್​ನಲ್ಲಿ ಭಾಗಿಯಾಗಲು ಪ್ರಪಂಚದ ತಂತ್ರಜ್ಞಾನ ಲೋಕದ ದಿಗ್ಗಜರು ಬೆಂಗಳೂರಿಗೆ ಬರುವ ಮುನ್ನ ಇಲ್ಲಿನ ರಸ್ತೆಗಳನ್ನು ಸರಿಪಡಿಸಿ, ಬೆಂಗಳೂರು ನಗರವನ್ನು ಮತ್ತೊಂದು ಸುತ್ತಿನ ಅವಮಾನದಿಂದ ಉಳಿಸಲಿ ಎನ್ನುವುದೇ ಜನರ ನಿರೀಕ್ಷೆ ಎಂದು ಅಶೋಕ್ ಆಗ್ರಹಿಸಿದ್ದಾರೆ.

 

 

Share This Article
error: Content is protected !!
";