ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಹೊಸದುರ್ಗ ಶಿಶು ಅಭಿವೃದ್ಧಿ ಯೋಜನಾ ಇಲಾಖೆ ವತಿಯಿಂದ ಹೊಸದುರ್ಗ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಅ.4 ರಂದು “ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತಾಗಿ ಪ್ರಬಂಧ ಸ್ಪರ್ಧೆ” ಆಯೋಜಿಸಲಾಗಿತ್ತು.
ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಭಿಲಾಷಾ ಪ್ರಬಂಧ ಸ್ಪರ್ಧೆಗಳು ಹೆಣ್ಣು ಮಕ್ಕಳಲ್ಲಿ ಆತ್ಮ ವಿಶ್ವಾಸ ಮತ್ತು ಬರವಣಿಗೆ ಜ್ಞಾನವನ್ನು ಹೆಚ್ಚಿಸುತ್ತದೆ.
ಸ್ವತಂತ್ರವಾಗಿ ಬದುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಕಾರಿಯಾಗುವುದು. ಹೆಣ್ಣು ಮಕ್ಕಳನ್ನು ಶಿಕ್ಷಿತರಾಗಿಸುವುದರಿಂದ ಸಮಾಜದಲ್ಲಿ ಲಿಂಗ ಸಮಾನತೆಯನ್ನು ಸುಧಾರಿಸುವುರದ ಜೊತೆಗೆ ಔದ್ಯೋಗಿಕ ಮತ್ತು ರಾಜಕೀಯವಾಗಿ ಹೆಣ್ಣು ಮಕ್ಕಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸಿದಂತಾಗುತ್ತದೆ ಎಂದರು.
ಈ ಪ್ರಬಂಧ ಸ್ಪರ್ಧೆಯಲ್ಲಿ ಟಿ.ಜೆ.ಪೂರ್ಣಿಮ, ವೈ.ಸಿ.ನೀತು, ಜೆ.ರಾಣಿ ಅನುಕ್ರಮವಾಗಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನಗಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.