ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿಸೆಂಬರ್ 02ರಂದು ಮಧ್ಯಾಹ್ನ 3ಕ್ಕೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ತುರುವನೂರು ಹೋಬಳಿ ವ್ಯಾಪ್ತಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಆಯೋಜಿಸಲಾಗಿದೆ.
ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ತುರುವನೂರು ಹೋಬಳಿಯ ಆರು ಗ್ರಾಮ ಪಂಚಾಯಿತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.