ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆಯಿತೋಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡ್ತಿ ಮುಖ್ಯ ಶಿಕ್ಷಕ ಕೆಂಚಪ್ಪ.ಎನ್.ಕೆ. ಇವರ ವಯೋನಿವೃತ್ತಿ ಜೀವನ ಸುಖಕರವಾಗಿಲೆಂದು ಅಭಿನಂದಿಸಿ ಶುಭ ಕೋರಿ ಬೀಳ್ಕೊಡಲಾಯಿತು.
ಚಿತ್ರದುರ್ಗ ತಾಲೂಕಿನ ಆಯಿತೋಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 18 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಸೋಮವಾರ ವಯೋನಿವೃತ್ತಿ ಹೊಂದಿದ್ದಾರೆ.
ಅವರ ನಿವೃತ್ತಿ ಜೀವನ ಸುಖಕರವಾಗಿಲೆಂದು ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಶಾಲಾ ಸಿಬ್ಬಂದಿ ವರ್ಗ, ಶಿಷ್ಯ ಬಳಗ, ಸಮಸ್ತ ಊರಿನ ಗ್ರಾಮಸ್ಥರು ಹಾಗೂ ಬಂಧು ಮಿತ್ರರು ಶುಭ ಕೋರಿದರು.