ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ ರಿಟ್ ಅರ್ಜಿ ವಿಚಾರಣೆ ಸೆ.2ಕ್ಕೆ ಮುಂದೂಡಿಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮ್ಮ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.
ಹಿರಿಯ ವಕೀಲ ರವಿವರ್ಮ ಕುಮಾರ್ ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಿದರೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ರಾಜ್ಯಪಾಲರ ಪರವಾಗಿ ವಾದಿಸಿದರು.
ಒಟ್ಟಾರೆಯಾಗಿ ಬೆಳಗ್ಗೆಯಿಂದ ಸುದೀರ್ಘ ವಾದ
, ಪ್ರತಿವಾದ ಆಲಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ. ವಾದ-ವಿವಾದದ ವೇಳೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿಗಳು ಬಹಳ ಜನ ವಾದ ಮಂಡನೆ ಮಾಡಿದ್ದೀರಿ. ಆದರೆ ಇದರಲ್ಲಿ ಸಿಎಂ ಪಾತ್ರ ಏನು ಎಂದು ಯಾರು ಹೇಳುತ್ತಿಲ್ಲ. ಸಿಎಂ ಪಾತ್ರದ ಬಗ್ಗೆ ನಿಮ್ಮ ಉತ್ತರವೇನು ಎಂದು ದೂರುದಾರರ ಪರ ವಕೀಲರಿಗೆ ಪ್ರಶ್ನಿಸಿದರು. ಅಲ್ಲದೆ ರಾಜ್ಯಪಾಲರ ಅನುಮತಿ ಬೇಕೋ ಬೇಡವೋ ನಿರ್ಧರಿಸಬೇಕು. ಅನುಮತಿ ನೀಡಿದ್ದು ಸರಿಯೋ ಇಲ್ಲವೋ ನಿರ್ಧರಿಸಬೇಕು. ಹೀಗಾಗಿ ಮಧ್ಯಂತರ ಆದೇಶ ಮುಂದೂಡಲಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಹೇಳಿದ್ದಾರೆ.
ಹೆಡ್ ಡಿಕೆ, ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ..
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು, ಶಾಸಕರು ಮತ್ತು ಸಂಸದರು ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿ
, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು. ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜಭವನ ರಾಜಕೀಯ ಪಕ್ಷದ ಕಚೇರಿಯಾಗಬಾರದು ಎಂಬ ಉದ್ದೇಶದಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾವು ರಾಜಭವನ ಚಲೋ ಹಮ್ಮಿಕೊಂಡಿರುವುದು ಸಿಎಂ ಸಿದ್ದರಾಮಯ್ಯ ಪರವಾಗಿ ಅಲ್ಲ. ಈ ವಿಷಯ ನ್ಯಾಯಾಲಯದಲ್ಲಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದರು. ಈ ಮಧ್ಯೆ, ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು, MUDA ಸಭೆ ಆಡಿಯೋ ದಾಖಲೆ ಬಿಡುಗಡೆ ಮಾಡಿದ್ದು 2020ರ ಮುಡಾ ಸಭೆಯಲ್ಲಿ ಸಿದ್ದರಾಮಯ್ಯ ಪತ್ನಿಗೆ ಸೈಟ್ ನೀಡುವ ಬಗ್ಗೆ ನಿರ್ಣಯವೇ ಆಗಿಲ್ಲ ಎಂದು ಹೇಳಿದ್ದಾರೆ.

- Advertisement -  - Advertisement - 
Share This Article
error: Content is protected !!
";