ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ ಹಾಗೂ ಬರ ಪೀಡಿತ ತಾಲೂಕು ಘೋಷಣೆಗೆ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ(ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ ನೇತೃತ್ವದಲ್ಲಿ ಅ.೨೭ರ ಸೋಮವಾರ ಬೆಳಗ್ಗೆ ೧೧.೩೦ಕ್ಕೆ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಶ್ರೀಕಂಠಮೂರ್ತಿ ತಿಳಿಸಿದ್ಧಾರೆ.

ಅವರು ನಗರದ ಪ್ರವಾಸಿಮಂದಿರದಲ್ಲಿ ಪ್ರತಿಭಟನೆ ಕುರಿತಂತೆ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲು ಸಭೆ ಸೇರಿ ಬೆಳೆವಿಮೆ, ಬೆಳೆನಷ್ಟ ಪರಿಹಾರ ಸೇರಿದಂತೆ ಚಳ್ಳಕೆರೆ ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಸರ್ಕಾರವನ್ನು ಒತ್ತಾಯಪಡಿಸಲಾಗುವುದು. ಅಖಂಡ ಕರ್ನಾಟಕ ರೈತಸಂಘವೂ ಸಹ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದರು. 

- Advertisement - 

ಈಗಾಗಲೇ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಜಿ.ತಿಪ್ಪೇಸ್ವಾಮಿ ಮಾರ್ಗದರ್ಶನದಲ್ಲಿ ತಾಲ್ಲೂಕಿನಾದ್ಯಂತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರೈತರನ್ನು ವಿನಂತಿಸಲಾಗಿದೆ. ಹೆಚ್ಚಿನಸಂಖ್ಯೆಯ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ಮೇಲೆ ಒತ್ತಡಹೇರಲಿದ್ಧಾರೆಂದರು.

ಅಖಂಡಕರ್ನಾಟಕ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಚಿಕ್ಕಣ್ಣ, ಉಪಾಧ್ಯಕ್ಷ ಯರ್ರಿಸ್ವಾಮಿ, ಚನ್ನಕೇಶವಮೂರ್ತಿ, ತಾಲ್ಲೂಕು ಅಧ್ಯಕ್ಷ ರಾಜಣ್ಣ, ಗೌರವಾಧ್ಯಕ್ಷ ಬೊಮ್ಮಣ್ಣ, ಪ್ರಧಾನಕಾರ್ಯದರ್ಶಿ ತಿಪ್ಪೇಸ್ವಾಮಿ, ಬಸವರಾಜು ಮುಂತಾದವರು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";