ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಕೆಎಸ್ಐಸಿ ಫಿಲೇಚರ್ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಯುವಜನ ಮತ್ತು ಕ್ರೀಡಾ ಇಲಾಖೆಗೆ 6 ಎಕರೆ 8 ಗುಂಟೆ ಜಾಗವನ್ನು ಹಸ್ತಾಂತರಿಸುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಕಾರ್ಮಿಕರ ಹೋರಾಟಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೆಂಬಲ ಸೂಚಿಸಿತು.
ಟೀ.ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ಕಾರ್ಖಾನೆ ಘಟಕವು ನಾಡಿನ ಐತಿಹಾಸಿಕ ಸಂಸ್ಥೆಯಾಗಿದ್ದು, ಸಾವಿರಾರು ಕಾರ್ಮಿಕರಿಗೆ ಜೀವನೋಪಾಯ ಒದಗಿಸುತ್ತಾ ಬಂದಿದೆ. ಮೈಸೂರು ಜಿಲ್ಲೆ ಮಾತ್ರವಲ್ಲದೆ ಇಡೀ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಸಂಸ್ಥೆ ಆಗಿರುವ ಈ ಕಾರ್ಖಾನೆಯನ್ನ ಉಳಿಸಿಕೊಳ್ಳಬೇಕು, ಕ್ರೀಡಾಂಗಣ ನಿರ್ಮಾಣಕ್ಕೆ ಪರ್ಯಾಯ ಸ್ಥಳ ಗುರುತಿಸಬೇಕು ಎಂದು ಅಶೋಕ್ ಅವರು ಸರ್ಕಾರವನ್ನು ಆಗ್ರಹಿಸಿದರು.

