ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 08 ಆಯೋಜಿಸಲಾಗಿರುವ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಆಂದೋಲನದಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಕುರಿತು ಆರೋಪ ಮಾಡಿದ್ದು ಈ ಸಂಬಂಧ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರತಿಭಟನಾ ರ್ಯಾಲಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಆಗುವ ಸಾಧ್ತೆ ಇದ್ದು ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ಪರ್ಯಾಯ ಮಾರ್ಗಗಳು-
ಶಾಂತಲಾ ಜಂಕ್ಷನ್ ಮತ್ತು ಖೋಡೆ ಸರ್ಕಲ್‌ನಿಂದ ಆನಂದ್ ರಾವ್ ಫ್ಲೈಓವರ್, ಒಲ್ಡ್ ಜೆಡಿಎಸ್ ರಸ್ತೆ, ಶೇಷಾದ್ರಿಪುರ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಇವುಗಳ ಬದಲು ಲುಲು ಮಾಲ್, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರಂ, ನೆಹರು ಸರ್ಕರ್, ರೇಸ್ ಕೋರ್ಸ್ ಫ್ಲೈಓವರ್ ಕಡೆಯಿಂದ ಪ್ರಯಾಣಿಸಬಹುದಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಕಡೆಗೆ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯವಾಗಿ ಕೆಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ರಾಜೀವ್ ಗಾಂಧಿ ಸರ್ಕಲ್, ರೇಸ್ ಕೋರ್ಸ್ ಫ್ಲೈಓವರ್ ಮೂಲಕ ಹೋಗಬಹುದು. ಚಾಲುಕ್ಯದಿಂದ ಮೈಸೂರು ಬ್ಯಾಂಕ್ ಕಡೆಗೆ ಸಂಚಾರ ನಿಷೇಧಿಸಲಾಗಿದ್ದು, ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್‌ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್‌ನಿಂದ ಸಂಚರಿಸಲು ಸೂಚಿಸಲಾಗಿದೆ.
ಕಾಳಿದಾಸ ರಸ್ತೆ, ಕನಕದಾಸ ಜಂಕ್ಷನ್‌ಕಡೆಯಿಂದ ಫ್ರೀಡಂಪಾರ್ಕ್ ಕಡೆಗೆ ಸಂಚರಿಸುವ ವಾಹನಗಳು ಕನಕದಾಸ ಜಂಕ್ಷನ್‌ನಿಂದ ಬಲ ತಿರುವು ಪಡೆದು ಸಾಗರ ಜಂಕ್ಷನ್‌ಕಡೆಗೆ ಸಂಚರಿಸಬಹುದು.
ಮೌರ್ಯ ಸುಬ್ಬಣ್ಣ ಜಂಕ್ಷನ್‌ನಿಂದ ಫ್ರೀಡಂಪಾರ್ಕ್‌ಗೆ ತೆರಳುವವರು ಸುಬ್ಬಣ್ಣ ಜಂಕ್ಷನ್‌ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

