ಮೂಲಭೂತ ಸೌಲಭ್ಯಗಳಿಗಾಗಿ ಕೊಳಗೇರಿ ನಿವಾಸಿಗಳಿಂದ ಪ್ರತಿಭಟನೆ 

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ
, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಹಿಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ವಿಜಯನಗರ ಬಡಾವಣೆ, ಹಳ್ಳದೇರಿಯಾ, ಬುದ್ದನಗರ, ಕುಂಬಾರಪೇಟೆ ಹಾಗೂ ವಿವಿಧ ಕೊಳಚೆಪ್ರದೇಶಗಳ ನಿವಾಸಿಗಳು ಹಕ್ಕುಪತ್ರ, ಮೂಲಭೂತ ಸೌಕರ್ಯಗಳಾದ ರಸ್ತೆ, ಬೀದಿದೀಪ, ಕುಡಿಯುವ ನೀರು, ಚರಂಡಿ, ಶೌಚಾಲಯ ವ್ಯವಸ್ಥೆ ಒದಗಿಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

- Advertisement - 

ಕೆ.ಕೆ.ಎನ್.ಎಸ್.ಎಸ್ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಎನ್.ರಂಗಸ್ವಾಮಿ, ಇಮಾಂಸಾಬ್, ಮೈಲಾರಪ್ಪ, ಸಹೀನಾಭಾನು, ಲೀಲಾವತಿ, ಭಾರತಿ, ಮೇರಿಯಮ್ಮ ರಾಧಮ್ಮ, ಮಂಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

- Advertisement - 

Share This Article
error: Content is protected !!
";