ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಹಾಗೂ ಬಿಜೆಪಿಯ ನಾಯಕರು ದಿನನಿತ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿ ಅಪಪ್ರಚಾರ ಮಾಡುತ್ತಿರುವುದು, ವಿನಾಕಾರಣ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ಖಂಡಿಸಿ
ಹಾಗೂ ವಖ್ಫ್ ಹಗರಣವನ್ನು ಮರೆಮಾಚಲು ಹಣದ ಆಮಿಷ ಒಡ್ಡಿದ ವಿಜಯೇಂದ್ರ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೆಪಿಸಿಸಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.