ಕೇಂದ್ರ ಸರ್ಕಾರದ ವಿರುದ್ಧ ನಿವೃತ್ತ ಸರ್ಕಾರಿ ನೌಕರರ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿ ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ನಿರ್ಧರಿಸಿರುವುದನ್ನು ಖಂಡಿಸಿ
  ದೊಡ್ಡಬಳ್ಳಾಪುರ ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರು  ತಾಲ್ಲೂಕು  ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ದೊಡ್ಡಬಳ್ಳಾಪುರ ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಟಿ.ಮುನಿರಾಜುಕಾರ್ಯದರ್ಶಿ ಕೆ.ಚನ್ನಪ್ಪ, ಪದಾಧಿಕಾರಿ ಎ.ಜಯರಾಮ್ ಮುಂತಾದವರು,   ಕೇಂದ್ರ ಸರ್ಕಾರದ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹಣಕಾಸು ಬಿಲ್ ಮಂಡಿಸುವಾಗ ಏಪ್ರಿಲ್ 1, 2026ಕ್ಕೆ ಮೊದಲು ನಿವೃತ್ತಿಯಾದ ಸರ್ಕಾರಿ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿ ಪರಿಷ್ಕರಿಸಲು ಸಾಧ್ಯವಾಗುವುದಿಲ್ಲ ಎಂಬ ನಿರ್ಣಯವನ್ನು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ.  ಇದು ಪಿಂಚಣಿದಾರರಿಗೆ ಆರ್ಥಿಕ ಸಂಕಷ್ಟವನ್ನು ತರುತ್ತದೆ  ಎಂದರು.

- Advertisement - 

 ಕೇಂದ್ರ ಸರ್ಕಾರವು  ನಿವೃತ್ತ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ವೇತನ ಪರಿಷ್ಕರಿಸಲು ಈಗಾಗಲೇ ಎಂಟನೇ ವೇತನ ಆಯೋಗವನ್ನು ರಚನೆ ಮಾಡಲಾಗಿದೆ. ಆಯೋಗ ಕೂಡ ಈಗಾಗಲೇ ಕಾರ್ಯೋನ್ಮುಖವಾಗಿದೆ.  ಆದರೆ ಕೇಂದ್ರ ಸರ್ಕಾರದ ಹಣಕಾಸು ಸಚಿವೆಯವ ಹೇಳಿಕೆಯು ಪಿಂಚಣಿದಾರರ ನೆಮ್ಮದಿ ಕೆಡಿಸಿದೆ.  ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಪಿಂಚಣಿದಾರರ ಒಕ್ಕೂಟ ಇತ್ತೀಚೆಗೆ ಸಭೆ ನಡೆಸಿ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿದೆ. ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಿದೆ ಎಂದರು. 

    ಪ್ರತಿಭಟನೆಯ ನಂತರ ದೊಡ್ಡಬಳ್ಳಾಪುರ ತಾಲ್ಲೂಕು    ನಿವೃತ್ತ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು  ತಾಲ್ಲೂಕು ತಹಸಿಲ್ದಾರರ  ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಕಳುಹಿಸಿದರು.

- Advertisement - 

 

 

Share This Article
error: Content is protected !!
";