ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕುಡಿದ ಮತ್ತಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಭೂತಯ್ಯನಹಟ್ಟಿ ಬೈಕ್ ಸವಾರ ಕೆಂಚಪ್ಪ (38) ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಭೂತಯ್ಯನಹಟ್ಟಿ ಗ್ರಾಮದ ಬೈಕ್ ಸವಾರ ಕೆಂಚಪ್ಪನ ಸಾವಿನಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ಮಧ್ಯ ಅಂಗಡಿಗಳ ವಿರುದ್ದ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದರು.
ಇದಲ್ಲದೆ ಹಿರಿಯೂರು ಅಬಕಾರಿ ಇಲಾಖೆ ಕಚೇರಿ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿ ಧಿಕ್ಕಾರ ಕೂಗಿದರು. ಅಬಕಾರಿ ಇಲಾಖೆ ಅಧಿಕಾರಿಗಳ ವಿರುದ್ದ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು. ಅಕ್ರಮ ಮದ್ಯ ಮಾರಾಟ ಹಿನ್ನೆಲೆ ಸಾವುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಆರೋಪಿಸಿದರು.
ಮದ್ಯದಂಗಡಿ ಮುಚ್ಚುವಂತೆ ಅಬಕಾರಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಹರ ಸಹಾಸ ಪಟ್ಟರು.