ಕನ್ನಡಿಗರಿಗೆ ಉದ್ಯೋಗ ನೀಡಲು ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜವನಗೊಂಡನಹಳ್ಳಿಯ ಸ್ನೇಹ ಪೌಲ್ಟ್ರಿ ಫೀಡ್ಸ್ ಕಂಪನಿಯು ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡದೆ ಅನ್ಯಾಯ ಮಾಡುತ್ತಿರುವುದರ ವಿರುದ್ಧ ದಲಿತ
, ರೈತ, ಕನ್ನಡ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಾರ್ಮಿಕ ನಿರೀಕ್ಷಕರ ಕಛೇರಿ ಮುಂದೆ ಒಂದು ದಿನದ ಸಾಂಕೇತಿಕ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಭಾರತೀಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಕೆ.ತಿಮ್ಮರಾಜು, ಮಹಾನಾಯಕ ದಲಿತ ಸೇನೆ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಕೆ.ಪಿ.ಶ್ರೀನಿವಾಸ್, ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ  ಹೊರಕೇರಪ್ಪ,

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುನುಮಂತರಾಯ, ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಶಿಕಾಂತ್, ಭರತ್, ತಿರುಮಲೇಶ್, ಶೋಕತ್, ಮಹಮದ್ ಇಲಿಯಾಸ್, ಅಸ್ಲಾಂ, ಶುಕೂರ್ ಭಾರತೀಯ ದಲಿತ ಸಂಘರ್ಷ ಸಮಿತಿಯ ಚಂದ್ರಪ್ಪ ಘಾಟ್,

ರಾಜಣ್ಣ, ಎಐಬಿಸ್ಪಿಯ ಮಹಾಲಿಂಗಪ್ಪ, ಜಗದೀಶ್, ನರಸಿಂಹಮೂರ್ತಿ, ರಾಘು, ಮೈಗಣ್ಣ, ಶಿವು, ರಾಘು ಓಬಳಾಪುರ, ರಾಜು ಸೂರಗೊಂಡನಹಳ್ಳಿ, ಲಕ್ಶ್ಮೀಕಾಂತ್  ಮುಂತಾದವರು ಭಾಗವಹಿಸಿದ್ದರು.

 

 

Share This Article
error: Content is protected !!
";