ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಚರ್ಚಿಸಿದರು.

ಸಚಿವರ ನಿಯೋಗದ ಭೇಟಿಗೂ ಮೊದಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ದೂರವಾಣಿ ಮೂಲಕ ಇದೇ ವಿಚಾರಗಳ ಬಗ್ಗೆ ಮಾತನಾಡಿದರು.

ದಕ್ಷಿಣ ರಾಜ್ಯಗಳ ಪ್ರತಿರೋಧಕ್ಕೆ ನನ್ನ ಬೆಂಬಲ ಸದಾ ಇರಲಿದೆ. ಕರ್ನಾಟಕದ ಹಿತಾಸಕ್ತಿಗೆ ವಿರುದ್ಧವಾದ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ, ಸಂವಿಧಾನದ ಒಕ್ಕೂಟ ತತ್ವಕ್ಕೆ ವಿರುದ್ಧವಾದ ಕೇಂದ್ರ ಸರ್ಕಾರದ ಎಲ್ಲಾ ನಡೆಗಳನ್ನೂ ನಾವು ಮುಲಾಜಿಲ್ಲದೆ ಖಂಡಿಸುತ್ತೇವೆ. ಈ ವಿಚಾರದಲ್ಲಿ ಹೋರಾಟಕ್ಕೂ ಬೆಂಬಲ ನೀಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

 

Share This Article
error: Content is protected !!
";