ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯದಿಂದಾಗಿ ಅಮಾಯಕರು ಬಲಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಾಲ್ತುಳಿತದಲ್ಲಿ 11ಜನರನ್ನು ಬಲಿ ಪಡೆದ ಈ ಘೋರ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಪ್ರತಿಭಟನಾಕಾರರು ಕಿಡಿ ಕಾಡಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಕೂಡಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಸಂಸದ ಗೋವಿಂದ ಕಾರಜೋಳ, ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಸಂಸದರು, ಶಾಸಕರು, ಪರಿಷತ್ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.