ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಅಭಿ ಯೋಜನೆ ಇಲಾಖೆ ತಾಲೂಕ ಆಡಳಿತ ನಗರ ಸಭೆ ತಾಲೂಕು ಪಂಚಾಯಿತಿ ಕಾರ್ಮಿಕ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಲಾಯಿತು.
ನಗರದ ತಾಲೂಕು ಕಚೇರಿ ಮುಂಭಾಗ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಹಾಗೂ ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ ಸುಜಾತ ಸುವರ್ಣ ಬಿ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಣದಿಂದ ವಂಚಿತರಾಗುವ ಮಕ್ಕಳು, ಹೋಟೆಲ್ ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುವ ಬಾಲ ಕಾರ್ಮಿಕ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಕೆಲಸ ಆಗಬೇಕಿದೆ. ಅಂತಹ ಮಕ್ಕಳ ಪೋಷಕರಿಗೆ ಮತ್ತು ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿಬೇಕು. ಮಾಲೀಕರಿಗೆ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಂತೆ ತಿಳಿಸಬೇಕು ಎಂದರು.
ಬಾಲ ಕಾರ್ಮಿಕರ ದಿನಾಚರಣೆಗೆ ಸೀಮಿತವಾಗಬಾರದು. ಪ್ರತಿದಿನ ಪ್ರತಿಕ್ಷಣ ಬಾಲಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ತಿಳಿಸಿ ಪೋಷಕರಿಗೆ ಸಹ ಮಾಹಿತಿ ನೀಡಿ ಮಕ್ಕಳಿಗೆ ಶಿಕ್ಷಣ ತುಂಬಾ ಅಗತ್ಯ ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದು ಶಿಕ್ಷಣ ಕಲಿತರೆ ಮಕ್ಕಳಿಗೆ ಮುಂದೊಂದು ದಿನ ದಾರಿದೀಪವಾಗಲಿದೆ ಎಂದು ಪೋಷಕರಿಗೆಕಿವಿ ಮಾತು ಹೇಳಿದರು.
ಹಿರಿಯೂರು ತಾಲೂಕು ವಕೀಲರ ಸಂಘದ ಅಧ್ಯಕ್ಷ ರಂಗೇನಹಳ್ಳಿ ರಾಮಚಂದ್ರಪ್ಪ ಮಾತನಾಡಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಮರವಾಗಿ ಬೆಳೆಸಿದರೆ ನೆರಳು ನೀಡುತ್ತದೆ ಹಾಗೆಯೇ ಚಿಕ್ಕ ವಯಸ್ಸಿನ ಮಕ್ಕಳಿಗೆ ಪೋಷಕರು ಉತ್ತಮ ಶಿಕ್ಷಣ ನೀಡಿದರೆ ಸಮಾಜಕ್ಕೆ ಅಂಥಹ ಮಕ್ಕಳಿಂದ ಸಾಕಷ್ಟು ಕೊಡುಗೆ ಸಿಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸಿ ರಾಜೇಶ್ ಕುಮಾರ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ಹಾಗೂ ಸದಸ್ಯ ಕಾರ್ಯದರ್ಶಿಗಳು ತಾಲೂಕು ಕಾನೂನು ಸೇವಾ ಸಮಿತಿ ಶ್ರೀಧರ್ ಹೆಚ್.ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ ಎಂ ತಿಪ್ಪೇಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್ ರಾಘವೇಂದ್ರ, ಪೊಲೀಸ್ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಕಾರ್ಮಿಕ ನಿರೀಕ್ಷಕ ಅಲ್ಲಾಭಕ್ಷಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಚಿತ್ರಲಿಂಗಪ್ಪ, ಜಂಟಿ ಕಾರ್ಯದರ್ಶಿ ಬಿ ವೆಂಕಟೇಶ ಶಿಲ್ಪಿ, ಖಜಾಂಚಿ ವೈ ಸೈಯದ್ ನವಾಜ್ ಇತರರು ಇದ್ದರು.