ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ವಕೀಲರೊಬ್ಬರು ಉಪ ವಿಭಾಗಾಧಿಕಾರಿಗಳಿಗೆ ಬೆದರಿಕೆ ಹಾಕಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜನವರಿ-27ರ ಮಂಗಳವಾರ ಬಾಕಿ ಕಡತಗಳ ವಿಲೇವಾರಿ ಹಾಗೂ ಆದೇಶ ಜಾರಿ ಕುರಿತಂತೆ ನಡೆದ ಸಭೆಯಲ್ಲಿ ವಕೀಲರೊಬ್ಬರು ಉಪ ವಿಭಾಗಾಧಿಕಾರಿ ದುರ್ಗಾಶ್ರೀ ಅವರನ್ನು ಏಕವಚನದಿಂದ ಬೈದು, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಅಲ್ಲದೇ ನಾನು ಶಾಸಕರಿಗೆ ಆಪ್ತನಾಗಿದ್ದು ನಿಮಗೇನು ಮಾಡಬೇಕೆಂದು ತಿಳಿದಿದೆ ನೀವೇನು ಮಾಡಲು ಸಾಧ್ಯ ಮಾಡಿಕೊಳ್ಳಿ ಎಂದಿದ್ದಾರೆ.
ಮಹಿಳೆಯರು ಸಾರ್ವಜನಿಕ ವಲಯದಲ್ಲಿ ಕರ್ತವ್ಯ ನಿರ್ಮಿಸುವುದೇ ಕಷ್ಟಕರ ಅಂತಹ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ ಕರ್ತವ್ಯ ನಿರ್ಮಿಸುತ್ತಿರುವ ಮಹಿಳಾ ಅಧಿಕಾರಿ ಮೇಲೆ ಈ ರೀತಿ ಬೆದರಿಕೆ ಹಾಕಿದರೆ ಮಹಿಳಾ ಸಿಬ್ಬಂದಿ ಕೆಲಸ ಮಾಡುವುದಾದರೂ ಹೇಗೆ ವಕೀಲರು ಸಮಾಜದ ಪ್ರಜ್ಞಾವಂತರಾಗಿರುತ್ತಾರೆ.
ಅವರೇ ಹೀಗೆ ನಡೆದುಕೊಂಡರೆ ಹೇಗೆ ಇಂತಹ ನಡವಳಿಕೆಗಳು ಮುಂದೆ ನಡೆಯದಂತೆ ನೋಡಿಕೊಳ್ಳಬೇಕು . ಅಧಿಕಾರಿಗಳು ಯಾವುದೇ ಒತ್ತಡವಿಲ್ಲದೆ ತಮ್ಮ ಕರ್ತವ್ಯ ನಿರ್ವಹಿಸಲು ನಾವೆಲ್ಲರೂ ಸಹಕರಿಸಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

