ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿ ಪ್ರಕಟ ಹಾಗೂ ಪುಸ್ತಕಗಳ ಪ್ರದರ್ಶನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು,

- Advertisement - 

ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಹಾಗೂ ಸದರಿ ಪುಸ್ತಕಗಳ ಪ್ರದರ್ಶನವನ್ನು ಬೆಂಗಳೂರಿನ ಹಂಪಿನಗರ ಪಶ್ಚಿಮ ವಲಯದ ನಗರ ಕೇಂದ್ರ ಗ್ರಂಥಾಲಯದ  “ಗ್ರಂಥಾಂಗಣ”ದಲ್ಲಿ ಅಕ್ಟೋಬರ್ 4 ರಿಂದ 5 ರವರೆಗೆ ಬೆಳಿಗ್ಗೆ 10.00 ರಿಂದ ಸಂಜೆ 5.30 ರವರೆಗೆ ಹಮ್ಮಿಕೊಳ್ಳಲಾಗಿದೆ.

- Advertisement - 

ಆಯ್ಕೆಯಾದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಇಲಾಖೆಯ ಅಧಿಕೃತ ಜಾಲತಾಣ dpl.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";