ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಪರೇಷನ್ ಸಿಂಧೂರ ಒಂದು ದೇಶ, ಒಂದು ಗಂಡ ಯೋಜನೆಯೇ?’ ಎಂದು ಪ್ರಶ್ನಿಸುವ ಮೂಲಕ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೀಳು ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿಯವರ ಹೆಸರಲ್ಲಿ ಸಿಂಧೂರವನ್ನು ಧರಿಸುತ್ತೀರೇ? ಇದು ಒಂದು ದೇಶ, ಒಂದು ಗಂಡ ಯೋಜನೆಯೇ? ಎಂದು ಅವಮಾನಿಸಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಭಾರತದ ನಾರಿ ಶಕ್ತಿಯ ಪ್ರತೀಕವಾಗಿ ಪಾಕಿಸ್ತಾನ ವಿರುದ್ಧದ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿದೆ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ತಮ್ಮ ಪತಿಯನ್ನು ಕಳೆದುಕೊಂಡ ಮಹಿಳೆಯರ ಸೇಡಿನ ದ್ಯೋತಕವಾಗಿ ಆಪರೇಷನ್ ಸಿಂಧೂರ ಎಂದು ಹೆಸರಿಡಲಾಗಿತ್ತು.
ಆದರೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಿಂಧೂರ ಹೆಸರಿನಲ್ಲಿ ದೇಶದ ನಾರಿಯರಿಗೆ ಅವಮಾನ ಮಾಡಿದ್ದಾರೆ. ಸುದ್ದಿಗಳ ಪರಾಮರ್ಶೆ ಮಾಡದೆ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಸುಳ್ಳು ಸುದ್ದಿಯನ್ನು ಹರಡುವ ಕೀಳು ಮಟ್ಟದ ಕೆಲಸಕ್ಕೆ ಕಾಂಗ್ರೆಸ್ ಸೇರಿದಂತೆ ಇಂಡಿ ಒಕ್ಕೂಟ ಇಳಿದಿರುವುದು ನಿಜಕ್ಕೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಬಿಜೆಪಿ ಹರಿಹಾಯ್ದಿದೆ.