ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಸಿ.ಟಿ.ರವಿ ಅವರನ್ನ ಬಿಟ್ಟಿದ್ದೇ ಪುಣ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ
, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ಸಿ.ಟಿ.ರವಿ ಅವರನ್ನ ಬಿಟ್ಟಿದ್ದೇ ಪುಣ್ಯ ಅಂದರೆ ತಮ್ಮ ಮಾತಿನ ಅರ್ಥವೇನು? ಜೀವಂತವಾಗಿ ಬಿಟ್ಟಿದ್ದೇ ಪುಣ್ಯ ಅಂತಲಾ? ಇನ್ನೂ ಪ್ರಾಣ ತೆಗೆಯದೆ ಉಳಿಸಿರುವುದೇ ಪುಣ್ಯ ಆಂತಲಾ? ಅಥವಾ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ತಾಲಿಬಾನಿಗೆ ಸೇರಿದ್ದು ಅಂತಲಾ? ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರು ತಾಲಿಬಾನಿಗಳು ಅಂತಲಾ? ಕಾನೂನು ಕೈಗೆತ್ತುವ ರೌಡಿಗಳಿಗೆ, ಗೂಂಡಾಗಳಿಗೆ ನಿಮ್ಮ ಮಾತಿನಿಂದ ಏನು ಸಂದೇಶ ಹೋಗುತ್ತದೆ ಎನ್ನುವ ಪ್ರಜ್ಞೆ ತಮಗಿದೆಯೇ? ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ತಾವೊಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರು. ರಾಜ್ಯದ ಉಪಮುಖ್ಯಮಂತ್ರಿಗಳು. ಮುಂದೊಂದು ದಿನ ಮುಖ್ಯಮಂತ್ರಿ ಆಗಬೇಕು ಎಂದು ಕನಸು ಕಾಣುತ್ತಿರುವವರು. ತಮ್ಮಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡಬಾರದು.

ತಾವು ಮುಖ್ಯಮಂತ್ರಿ ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಏನಾಗುತ್ತೆ ಅಂತ ತಮ್ಮ ಮಾತುಗಳೇ ಸೂಚನೆ ಕೊಡುತ್ತಿವೆ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎನ್ನುವುದನ್ನ ಮರೆಯಬೇಡಿ.

ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳಿ. ಕನಿಷ್ಠ ಪಕ್ಷ ಸಾರ್ವಜನಿಕವಾಗಿ ಮಾತನಾಡುವಾಗಲಾದರೂ ತಮ್ಮ ಸ್ಥಾನಕ್ಕೆ ತಕ್ಕಂತೆ ಮಾತನಾಡಿ ಎಂದು ಆರ್.ಅಶೋಕ್ ತಾಕೀತು ಮಾಡಿದ್ದಾರೆ.

- Advertisement -  - Advertisement - 
Share This Article
error: Content is protected !!
";