ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಗೌಡನಹಳ್ಳಿ ಗ್ರಾಮ ಪಂಚಾಯ್ತಿಯ ಪರಿಶಿಷ್ಟ ಜಾತಿಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಪುಟ್ಟ ನರಸಮ್ಮ ಚಂದ್ರಹಾಸ್ ಅವಿರೋಧ ಆಯ್ಕೆಯಾದರು.
ತಹಶೀಲ್ದಾರ್ ರಾಜೇಶ್ ಕುಮಾರ್ ಚುನಾವಣಾಧಿಕಾರಿಯಾಗಿದ್ದರು. ಈ ಸಂದರ್ಭದಲ್ಲಿ ಸದಸ್ಯರುಗಳಾದ ನಾಗರಾಜ್, ನಾಗಭೂಷಣ್, ಓಪಿಟಿ ಸ್ವಾಮಿ, ತಿಪ್ಪೇಸ್ವಾಮಿ, ಗಂಗಮ್ಮ, ಪಿಡಿಓ ರಾಜೇಶ್ವರಿ ಮುಂತಾದವರು ಹಾಜರಿದ್ದರು.