ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ. ಈ ಹಿಂದಿನ ಅವಧಿಯಲ್ಲಿ ಗಲಭೆಯಲ್ಲಿ ಭಾಗಿಯಾಗಿದ್ದ ಕೆಎಫ್‌ಡಿ, ಪಿಎಫ್ಐ ನಂತಹ ಮತಾಂಧರ ಪ್ರಕರಣಗಳನ್ನು ಕಾಂಗ್ರೆಸ್ ಹಿಂಪಡೆದಿತ್ತು.
ಈಗ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದವರ ಪ್ರಕರಣ ಹಿಂಪಡೆಯುವ ಮೂಲಕ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಕಾಂಗ್ರೆಸ್ ಸರ್ಕಾರ ಕುಗ್ಗಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಪ್ರಕರಣ ಹೋರಾಟದ ಪ್ರಕರಣ ಆಗಲು ಹೇಗೆ ಸಾಧ್ಯ? ಎಂದು ಪ್ರತಿಪಕ್ಷ ನಾಯಕ ಅಶೋಕ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.