ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ, ಅಗರಖೇಡ, ಖೇಡಗಿ ಮತ್ತು ಮಿರಗಿ ಗ್ರಾಮಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದಾದ ಬೆಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಯಿತು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ರಮೇಶ್ ಜಿಗಜಿಣಗಿ, ಪಿ. ಸಿ. ಗದ್ದಿಗೌಡರ್, ಮಾಜಿ ಸಚಿವರಾದ ಸಿ. ಟಿ. ರವಿ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ. ಎಸ್. ಪಾಟೀಲ್ ನಡಹಳ್ಳಿ, ಮಾಜಿ ಶಾಸಕರಾದ ರಮೇಶ ಭೂಸನೂರ,
ಸೋಮನಗೌಡ ಪಾಟೀಲ, ಕಾಸುಗೌಡ ಬಿರಾದಾರ, ಅರುಣ ಶಹಾಪುರ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ವಿಜುಗೌಡ ಪಾಟೀಲ, ಉಮೇಶ ಕಾರಜೋಳ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

