ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲಾ ಮಟ್ಟದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಶ್ರೀ ಜ್ಞಾನಜ್ಯೋತಿ ಪ್ರೌಢಶಾಲೆ ಯಲ್ಲದಕೆರೆ ಹಿರಿಯೂರು ತಾಲ್ಲೂಕಿನ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಆರ್.ರಾಕೇಶ್ ಅವರು ಗುಂಡು ಎಸೆತ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಪ್ರಥಮ ಸ್ಥಾನ ಗಳಿಸಲು ಸೂಕ್ತ ಮಾರ್ಗದರ್ಶನ ನೀಡಿದ ಶಾಲೆಯ ದೈಹಿಕ ಶಿಕ್ಷಕಿ ಬಿ.ನಾಗವೇಣಿ, ವಿದ್ಯಾರ್ಥಿ ರಾಕೇಶ್ ರವರಿಗೆ ಶಾಲಾ ಆಡಳಿತ ಮಂಡಳಿಯವರು ಹಾಗೂ ಶಾಲಾ ಶಿಕ್ಷಕರು ಅಭಿನಂದನೆಗಳನ್ನು ತಿಳಿಸಿದ್ದಾರೆ.

