ಡ್ರೋನ್ ಬಳಸಿ ಪೋಷಕಾಂಶಗಳ ಸಿಂಪಡಿಸುವುದರಿಂದ ರೈತರಿಗೆ ಸಹಕಾರಿ-ರಾಘವೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕೃಷಿಯಲ್ಲಿ ಸಸ್ಯ ಪೋಷಕಾಂಶಗಳನ್ನು ಸಿಂಪಡಣೆ ಮಾಡಲು ಅಧಿಕ ಸಮಯ ಮತ್ತು ಹಣ ವ್ಯಯವಾಗುತ್ತಿದೆ. ಇದಕ್ಕೆ  ಪರಿಹಾರವಾಗಿ ಕೃಷಿ ಡ್ರೋನ್ ಬಳಸಿ ಸಿಂಪಡಣೆ ಮಾಡುವುದರಿಂದ ರೈತರಿಗೆ ಸಹಕಾರಿಯಾಗಲಿದೆ ಎಂದು : ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ಒಳ್ಳೆಯ ಮಾರ್ಗವಾಗಿದೆ ಎಂದು ತಿಳಿಸಿದರು.

  ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿ  ಕೃಷಿ ಇಲಾಖೆ ವತಿಯಿಂದ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ನಡೆದ  ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 ಪ್ರಸ್ತುತ ನಮ್ಮ ದೇಶದ ಜನಸಂಖ್ಯೆ  141 ಕೋಟಿಗಳಿದ್ದು, ಏರುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ  ಆಹಾರ ಮತ್ತು ಪೌಷ್ಠಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆಹಾರ ಬೆಳೆಗಳ ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಅತಿ ದೊಡ್ಡ ಸಮಸ್ಯೆಯಾಗಿದೆ  ಆದ್ದರಿಂದ ಡ್ರೋನ್ ಬಳಕೆಯಿಂದಾಗಿ ರೈತರು  ಸಾಕಷ್ಟು ಅನುಕೂಲ ಪಡೆಯಬಹುದು ಎಂದು ತಿಳಿಸಿದರು.

 ಕೃಷಿ ವಿಜ್ಞಾನ ಕೇಂದ್ರ, ವಿಜ್ಞಾನಿ ಡಾ ವೆಂಕಟೇಗೌಡ ಜೆ.  ಮಾತನಾಡಿ ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ. ಈ ವಿಧಾನದಿಂದ ಯೂರಿಯಾ ಹರಳುಗಳು ಸಸ್ಯಗಳ ಬೇರುಗಳಿಗೆ ಸೂಕ್ತವಾಗಿ ದೊರೆಯುವುದಿಲ್ಲ.

ವಾತವಾರಣದಲ್ಲಿ ತಾಪಮಾನ ಹೆಚ್ಚಾದಂತೆ ಯೂರಿಯಾದಲ್ಲಿನ ಪೋಷಕಾಂಶವು ಆವಿಯಾಗಬಹುದು. ಹೆಚ್ಚಿನ ಮಳೆಯಿಂದ ಕೊಚ್ಚಿ ಹೋಗುವ ಸಾಧ್ಯತೆ ಇರುತ್ತದೆ. ಈ ಸಮಸ್ಯೆಗಳಿಗೆ ಪರಿಹಾರವಾಗಿ ನ್ಯಾನೋ ಯೂರಿಯ ಸಿಂಪಡಣೆಯು ಯೋಗ್ಯ ಮಾರ್ಗವಾಗಿದೆ.

ನ್ಯಾನೋ ಯೂರಿಯಾದ ಸೂಕ್ಷ್ಮ  ಕಣಗಳು ಹೆಚ್ಚಿನ ಸುತ್ತಳತೆ ಹೊಂದಿದ್ದು, ಎಲೆಗಳ ಮೇಲೆ ಸಿಂಪಡಣೆ ಮಾಡಿದಾಗ ಶೀರ್ಘವಾಗಿ ಎಲೆಗಳಲ್ಲಿನ ಸೂಕ್ಷ್ಮ ರಂಧ್ರಗಳಾದ ಸ್ಟೋಮ್ಯಾಟ ಮೂಲಕ ಸಸ್ಯದ ಶರೀರದೊಳಗೆ ಸೇರಿ ಪೋಷಕಾಂಶಗಳು ನ್ಯಾಯೋಚಿತವಾಗಿ ಸಸ್ಯದ ಬೆಳವಣಿಗೆಗೆ ದೊರೆಯುವಂತೆ ಮಾಡುತ್ತವೆ. ರೈತರು ಈ ತಂತ್ರಜ್ಞಾನವನ್ನು ಬಳಸಿಕೊಂಡು ಆಹಾರ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ  ತಿಳಿಸಿದರು.

 ಇಫ್ಕೋ ಸಂಸ್ಥೆಯ ಚೇತನ್  ಮಾತನಾಡಿ, ನ್ಯಾನೋ ಯೂರಿಯಾ ಬಳಕೆಯಿಂದ ರೈತರ ಖರ್ಚು ಕಡಿಮೆಯಾಗುವುದಲ್ಲದೇ ರೈತರು ಹೆಚ್ಚಿನ ಆದಾಯ ಪಡೆಯಬಹುದು. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಡ್ರೋನ್ ಮೂಲಕ ಸಿಂಪರಣೆ ಮಾಡುವುದರ ಮೂಲಕ ರೈತರು ಕೃಷಿ ಕಾರ್ಮಿಕರ ಕೊರತೆ ನೀಗಿಸಬಹುದೆಂದು ತಿಳಿಸಿದರು.

 ಈ ವೇಳೆ ಕಾರ್ಯಕ್ರಮದಲ್ಲಿ ,ಕೊನ್ನಘಟ್ಟ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ  ಮಂಗಳ. ಸದಸ್ಯ ಪ್ರಭಾಕರ್, ಇಪ್ಕೋ ಸಂಸ್ಥೆಯ ಪ್ರತಿನಿಧಿಗಳು, ಪ್ರಗತಿ ಪರ ರೈತರುಕೃಷಿ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿಗಳು ಭಾಗವಹಿಸಿದ್ದರು

 

- Advertisement -  - Advertisement -  - Advertisement - 
Share This Article
error: Content is protected !!
";