ನಿಧಿ ಆಸೆಗಾಗಿ ಕೊಲೆಯಾದ ಪ್ರಭಾಕರ್ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಪರಶುರಾಮಪುರ ಹೋಬಳಿಯ ಚೌಳೂರು ಗೇಟ್‌ನ ಜಗಜೀವನರಾಮ್ ಕಾಲೋನಿ ಬಳಿ ಕಳೆದ ಫೆ.೯ರಂದು ಅದೇ ಗ್ರಾಮದ ಪ್ರಭಾಕರ(೫೫) ಎಂಬ ವ್ಯಕ್ತಿಯನ್ನು ಕೊಲೆಮಾಡಿದ್ದರು.

ಕ್ಷೇತ್ರದ ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಭೇಟಿ ನೀಡಿ ಪತ್ನಿ ಹನುಮಕ್ಕ ಮತ್ತು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಕೊಲೆ ಆರೋಪಿಗಳನ್ನು ಕ್ಷಿಪ್ರಗತಿಗಲ್ಲಿ ಬಂಧಿಸಿದ ಪೊಲೀಸ್ ಇಲಾಖೆ ಕಾರ್ಯಕ್ಕೆ ಶಾಸಕರು ಪ್ರಶಂಸೆ ವ್ಯಕ್ತಪಡಿಸಿದರು.

ತಹಶೀಲ್ದಾರ್ ರೇಹಾನ್‌ಪಾಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ, ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪಿಎಸ್‌ಐ ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಯ್ಯ, ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ನಗರಸಭಾ ಸದಸ್ಯ ಬಿ.ಟಿ.ರಮೇಶ್‌ಗೌಡ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಚನ್ನಕೇಶವ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್.ರುದ್ರೇಶ್, ತಾಲ್ಲೂಕು ಪಂಚಾಯಿತಿ ಕೆಡಿಪಿ ಸದಸ್ಯ ಬಸವರಾಜು, ಮುಖಂಡರಾದ ಚೌಳೂರು ಪ್ರಕಾಶ್, ಬಿ.ಕೆ.ಗುಜ್ಜಾರಪ್ಪ, ರಂಗಸ್ವಾಮಿ, ತಿಪ್ಫೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

 

Share This Article
error: Content is protected !!
";