ಮಹಿಳಾ ಶಿಕ್ಷಕಿಯರಿಗೆ ಅಕ್ಷರ ಸಿರಿ ಮತ್ತು ಉತ್ತಮ ಶಾಲೆ ಪ್ರಶಸ್ತಿ ಪ್ರದಾನ ಮಾಡಿದ ಶಾಸಕ ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ಹಲವಾರು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿಯನ್ನು ದಾಖಲಿಸಲಾಗಿದೆ. ಶೈಕ್ಷಣಿಕ ಬೆಳವಣಿಗೆಯಲ್ಲಿ ಶಿಕ್ಷಣ ಇಲಾಖೆ ಅಭಿವೃದ್ದಿ ಪಥದತ್ತ ಹೆಜ್ಜೆಇಡುತ್ತಿದೆ. ಇಂದು ಸಮಾಜದ ಪ್ರತಿಯೊಬ್ಬ ನಾಗರೀಕನೂ ಶಿಕ್ಷಣವಂತನಾಗಬೇಕೆಂಬ ಆತ್ಮವಿಶ್ವಾಸವನ್ನು ಶಿಕ್ಷಣ ಇಲಾಖೆ ಹುಟ್ಟುಹಾಕಿದೆ. ಶಿಕ್ಷಣ ಇಲಾಖೆಯ ಪ್ರಗತಿಹೆಜ್ಜೆಯಲ್ಲಿ ಮಹಿಳಾಶಿಕ್ಷಕಿಯರ ಹೆಜ್ಜೆಗುರುತನ್ನು ನಾವೆಲ್ಲಾ ಕಾಣಬಹುದು. ಮಹಿಳಾ ಶಿಕ್ಷಕಿಯರಿಗೆ ಆದರ್ಶವಾದ ಸಾವಿತ್ರಿಬಾಯಿಪುಲೆಯವರ ನಿರಂತರ ಸೇವೆ ಇದಕ್ಕೆ ಕಾರಣವೆಂದು ಕ್ಷೇತ್ರದ ಶಾಸಕ
, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕ, ಪ್ರಗತಿಪರ ಶಿಕ್ಷಕರ ವೇದಿಕೆ ಸಹಯೋಗದಲ್ಲಿ ಸಾವಿತ್ರಿಬಾಯಿಪುಲೆ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಗಾರ, ಅಕ್ಷರ ಸಿರಿ, ಉತ್ತಮ ಶಾಲೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಿಡಿಪಿಐ ಎಂ.ಆರ್.ಮಂಜುನಾಥ, ಶಿಕ್ಷಣ ಕ್ಷೇತ್ರ ಇಂದು ಪರಿಪೂರ್ಣವಾಗಿ ಅಭಿವೃದ್ದಿಯತ್ತ ಹೆಜ್ಜೆ ಇಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಜ್ಞಾನ ಸಂಪಾದನೆಗೆ ಅವಶ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಶಿಕ್ಷಣ ಇಲಾಖೆಯ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು, ಪ್ರತಿಯೊಬ್ಬ ಶಿಕ್ಷಕನೂ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಈ ಎರಡೂ ಕಾರ್ಯಗಳು ಶಿಕ್ಷಣ ಇಲಾಖೆಯಲ್ಲಿ ನಿರಂತರ ನಡೆಯುತ್ತಾ ಬಂದಿವೆ. ಶಿಕ್ಷಕರ ದಕ್ಷತೆ ಕಾರ್ಯದ ಬಗ್ಗೆ ಮೆಚ್ಚುಗೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಶಿಕ್ಷಕಿಯರಿಗೆ ಉತ್ತಮ ಸಾಧನೆಗಾಗಿ ಸಾವಿತ್ರಿಬಾಯಿಪುಲೆ ಜಯಂತಿ ಅಂಘವಾಗಿ ಅಕ್ಷರ ಸಿರಿ, ಉತ್ತಮ ಶಾಲೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ತಾಲ್ಲೂಕಿನಾದ್ಯಂತ ನೂರಾರು ಮಹಿಳಾ ಶಿಕ್ಷಕಿಯರು ಪಾಲ್ಗೊಂಡಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಶಿಕ್ಷಕರ ಸಂಘದ ರಾಜ್ಯಪ್ರತಿನಿಧಿ ಆರ್.ಮಾರುತೇಶ್ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ನಗರಸಭಾ ಉಪಾಧ್ಯಕ್ಷೆ ಸುಮಾ ಭರಮಣ್ಣ, ಸದಸ್ಯ ರಮೇಶ್‌ ಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಣ್ಣಸೂರಮ್ಮ, ಮಾಜಿ ಅಧ್ಯಕ್ಷ ಮಹಾಲಿಂಗಪ್ಪ, ಕಾರ್ಯದರ್ಶಿ ತಿಮ್ಮಣ್ಣ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share This Article
error: Content is protected !!
";