ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತುರುವನೂರು ಹೋಬಳಿಯ ಸಮಗ್ರ ಅಭಿವೃದ್ಧಿಗೆ ಹಂತ ಹಂತವಾಗಿ ಮಾಡುತ್ತಿದ್ದು ಸುಮಾರು 3 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಮಾಡಲಾಗುತ್ತಿದೆ ಎಂದು ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿಗ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ರಸ್ತೆ ಕಾಮಗಾರಿ ಮತ್ತು ಭವನ, ಸಿ.ಸಿ.ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು.
ತುರುವನೂರು ಹೋಬಳಿಯ ಸಮಗ್ರ ಅಭಿವೃದ್ಧಿ ನನ್ನ ಚಿಂತನೆಯಾಗಿದ್ದ ಎಲ್ಲಾ ಕಾಮಗಾರಿಗಳು ಸಹ ಚಾಲ್ತಿಯಲ್ಲಿದ್ದು ಮುಂದಿನ ದಿನದಲ್ಲಿ ಹೋಬಳಿಯ ಸಂಪೂರ್ಣ ಚಿತ್ರಣ ಬದಲಾಗಲಿದೆ ಎಂದರು.
ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ವಿಶೇಷ ಪ್ರದೇಶಾಭಿವೃದ್ದಿ ಯೋಜನೆಯಡಿ ಸುಮಾರು ೨ ಕೋಟಿ ವೆಚ್ಚದಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮದಿಂದ ಚಿಕ್ಕಪ್ಪನಹಳ್ಳಿ ಗ್ರಾಮದವರೆಗೆ ಸಂಪರ್ಕ ರಸ್ತೆಯ ಡಾಂಬರೀಕರಣ ಮಾಡಲಾಗುತ್ತಿದ್ದು ಗುಣಮಟ್ಟದ ಕಾಮಗರಿಗೆ ಒತ್ತು ನೀಡಲು ಇಂಜಿನಿಯರ್ ಗೆ ಮತ್ತು ಗುತ್ತಿಗೆದಾರನಿಗೆ ಸೂಚನೆ ನೀಡಿದ್ದೇನೆ.
ಚಿಕ್ಕಗೊಂಡನಹಳ್ಳಿ ಬೆಸ್ತರ ಕಾಲೋನಿಯಲ್ಲಿ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ನಿರ್ಮಿಸಲಾಗಿದ್ದ ಶುದ್ಧ ನೀರಿನ ಘಟಕ ಉದ್ಘಾಟನೆ ಮಾಡಿದ್ದು ಉತ್ತಮವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲ ಗ್ರಾಮ ಪಂಚಾಯತಿ ಅವರಿಗೆ ತಿಳಿಸಿದ್ದೇನೆ ಎಂದರು.
ಚಕ್ಕಗೊಂಡನಹಳ್ಳಿ ಗ್ರಾಮದ ಬೆಸ್ತರ ಕಾಲೋನಿಯಲ್ಲಿ ಸುಮಾರು ೧೦ ಲಕ್ಷ. ರೂಗಳ ವೆಚ್ಚದಲ್ಲಿ ಸಮುದಾಯ ಭವನ, ಎಸ್.ಸಿ ಕಾಲೋನಿಯಲ್ಲಿ ೧೦ ಲಕ್ಷ ರೂಗಳ ವೆಚ್ಚದಲ್ಲಿ ಕೊಲ್ಲಾಪುರದಮ್ಮ ದೇವಸ್ಥಾನ ಕಟ್ಟಡ ಮತ್ತು ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ ೬೫ ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಹಾಗೂ ೧೦ ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಕಾಮಗಾರಿಗಳ ಭೂಮಿ ಪೂಜೆ ನೇರವೇರಿಸಿದ್ದು ತುರ್ತಾಗಿ ಅಚ್ಚುಕಟ್ಟಾಗಿ ಕಾಮಗಾರಿ ಮಾಡಲಾಗುತ್ತದೆ.
ತುರುವನೂರು ಗ್ರಾಮದಲ್ಲಿ ರಸ್ತೆ ಅಗಲೀಕರಣ, ಗಾಂಧಿ ಪಾರ್ಕ್ , ಮೊರರ್ಜಿ ಶಾಲೆಗಳ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಮಹಾಂತಮ್ಮ, ಉಪಾಧ್ಯಕ್ಷ ಗಂಗಾಧರ, ಜಿಲ್ಲಾ ಗ್ಯಾರೆಂಟಿ ಸಮಿತಿ ಉಪಾಧ್ಯಕ್ಷ ಬಾಬುರೆಡ್ಡಿ, ಜಿಲ್ಲಾ ಗ್ಯಾರೆಂಟಿ ಸಮಿತಿಯ ಉಪಾಧ್ಯಕ್ಷರಾದ ಜಿ.ಟಿ.ಬಾಬುರೆಡ್ಡಿ,ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾದ ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಮುಖಂಡರಾದ ಗಟ್ಟಿ ಓಬಯ್ಯ , ತಿಪ್ಪೇಸ್ವಾಮಿ,ದಾಸಪ್ಪ, ರಾಘವೇಂದ್ರ, ನಾಗರಾಜ, ಚಿದಾನಂದಮೂರ್ತಿ, ಮಲ್ಲಿಕಾರ್ಜುನ, ರವಿ, ಹರೀಶ್ ಇದ್ದರು.