ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತದಾರರ ಹಕ್ಕಿನ ರಕ್ಷಣೆಗಾಗಿ ರಾಹುಲ್ ಗಾಂಧಿ ಮುನ್ನುಡಿ ಬರೆದಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ನಮ್ಮ ಮತ – ನಮ್ಮ ಹಕ್ಕು – ನಮ್ಮ ಹೋರಾಟ’ ಪ್ರತಿಭಟನಾ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು, ನಮ್ಮ ಭೂಮಿಯ ಪುತ್ರರು, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗಾಗಿ ಹೋರಾಡುತ್ತಿರುವ ನಮ್ಮ ನೆಚ್ಚಿನ ನಾಯಕರು,
ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ನಡೆದ ಇಂದಿನ ‘ನಮ್ಮ ಮತ – ನಮ್ಮ ಹಕ್ಕು – ನಮ್ಮ ಹೋರಾಟ’ ಪ್ರತಿಭಟನಾ ಸಮಾವೇಶ – ಐತಿಹಾಸಿಕ ಎಂದು ಡಿಕೆ ಶಿವಕುಮಾರ್ ಬಣ್ಣಿಸಿದರು.

