ರಾಹುಲ್‌ ಗಾಂಧಿಗೆ ಕಾಮನ್‌ಸೆನ್ಸ್‌ ಇಲ್ಲ-ಅಶೋಕ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ನಾಯಕ ರಾಹುಲ್ ಗಾಂಧಿ ಅವರು ತಮ್ಮ ಮಾತಿನಿಂದಲೇ ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ, ಅಲ್ಲದೆ ರಾಹುಲ್‌ಗಾಂಧಿ ಅವರಿಗೆ ಕಾಮನ್‌ಸೆನ್ಸ್‌ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಾಯಕರು ಚುನಾವಣಾ ಅಕ್ರಮದ ಬಗ್ಗೆ ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಆಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

- Advertisement - 

ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್‌ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್‌ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದರು.

ಮುಂಬರುವ ಬಿಹಾರ ಚುನಾವಣೆಯಲ್ಲಿ ಸೋಲುವ ಭೀತಿ ಇದ್ದು ಕಾಂಗ್ರೆಸ್‌ನಾಯಕರಿಗೆ ಭ್ರಮನಿರಸನವಾಗಿದೆ. ಅದಕ್ಕಾಗಿ ಮೊದಲೇ ಆರೋಪ ಮಾಡಿ ಕೇವಿಯಟ್‌ರೀತಿಯಲ್ಲಿ ಮಾಡಿದ್ದಾರೆ. ಇವರು ಹಾಕುವ ಪಟಾಕಿಗಳು ಠುಸ್‌ಆಗಿದೆ ಎಂದು ಅವರು ಆರೋಪಿಸಿದರು.

- Advertisement - 

ಚುನಾವಣಾ ಆಯೋಗದ 45 ದಿನ ಗಡುವು ನೀಡಿದೆ. ಆ ಸಮಯದಲ್ಲಿ ಇವರು ಮಣ್ಣು ತಿನ್ನುತ್ತಿದ್ದರು. ದಾಖಲೆ ಇದ್ದರೆ ಆಗಲೇ ಕೋರ್ಟ್‌ಗೆ ಹೋಗಬೇಕಿತ್ತು. ಇದಕ್ಕೆ ಕಾಂಗ್ರೆಸ್‌ಪಕ್ಷ ಉತ್ತರ ನೀಡಲಿ ಎಂದು ಅಶೋಕ್ ತಾಕೀತು ಮಾಡಿದರು.

ಮುಳುಗುತ್ತಿರುವ ಹಡಗು:
ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲೇ ಈ ಬಗ್ಗೆ ಮಾತನಾಡಬೇಕಿತ್ತು. ಆದರೆ ಅವರು ಹಿಟ್‌ಆಂಡ್‌ರನ್‌ರೀತಿಯಲ್ಲಿ ಆರೋಪ ಮಾಡುವುದು ಕಾಂಗ್ರೆಸ್‌ಜಾಯಮಾನ. ದಾಖಲೆ ಇಲ್ಲವಾದಾಗ ಮಾಧ್ಯಮಗಳ ಮುಂದೆ ಆರೋಪ ಮಾಡುತ್ತಾರೆ. ಚುನಾವಣಾ ಆಯೋಗದ ಮುಂದೆ ಹೋಗಿ ದಾಖಲೆ ನೀಡಬೇಕಿತ್ತು. ಚುನಾವಣಾ ಆಯೋಗವನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ತೆಲಂಗಾಣದಲ್ಲಿ ಮುಖ್ಯಮಂತ್ರಿಯೇ ಪಾಪರ್‌ಆಗಿದ್ದೇವೆಂದು ಹೇಳಿದ್ದಾರೆ. ತಮಿಳುನಾಡಲ್ಲೂ ಸಮೀಕರಣ ಬದಲಾಗಿದೆ. ಇಂಡಿಯಾ ಕೂಟವು ಮುಳುಗುತ್ತಿರುವ ಹಡಗಾಗಿದೆ ಎಂದು ಅಶೋಕ್ ಆರೋಪಿಸಿದರು. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್‌ಸರಿಯಾಗಿ ಉಳಿದಿದೆ. ಮುಸ್ಲಿಂ ಸಮುದಾಯದವರು ಅಕ್ರಮ ಮಾಡುತ್ತಿದ್ದಾರೆ. ಬಾಂಗ್ಲಾ ದೇಶದವರು ಇಲ್ಲಿಗೆ ಬಂದು ಮತದಾನ ಮಾಡುತ್ತಾರೆ.

ಅಂಥವರಿಗೆ ವೋಟರ್‌ಐಡಿ ನೀಡುವುದು ಯಾರು? ದೇಶದ ಭದ್ರತೆಯ ದೃಷ್ಟಿಯಿಂದ ಅಂಥವರನ್ನು ವಾಪಸ್‌ಕಳಿಸಬೇಕು. ಆದರೆ, ಕಾಂಗ್ರೆಸ್‌ದೇಶದ ಭದ್ರತೆಗಿಂತ ಹೆಚ್ಚಾಗಿ ಮತಬ್ಯಾಂಕ್‌ಮುಖ್ಯ. ಪಾಕಿಸ್ತಾನ, ಬಾಂಗ್ಲಾದವರು ಆ ದೇಶದಲ್ಲೂ ಮತ ಹಾಕಿ, ಇಲ್ಲೂ ಬಂದು ಮತ ಚಲಾಯಿಸುತ್ತಾರೆ. ಒಬ್ಬರಿಗೆ ಒಂದೇ ಓಟು ಎಂಬ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಜಾರಿ ಮಾಡುತ್ತಿದ್ದಾರೆ ಎಂದು ಅಶೋಕ್ ತಿಳಿಸಿದರು.

 

 

Share This Article
error: Content is protected !!
";