ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಾಳಿಯಲ್ಲಿ ಗುಂಡು ಹೊಡೆಯುವ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ದಾಖಲೆ ಒದಗಿಸಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.
ಲೋಕಸಭಾ ಚುನಾವಣೆ ವೇಳೆ ಶಕುನ್ ರಾಣಿ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗದ ದತ್ತಾಂಶ ತೋರಿಸುತ್ತದೆ” ಎಂದು ಪತ್ರಿಕಾಗೋಷ್ಠಿಯಲ್ಲಿ ಸುಳ್ಳು ಆರೋಪ ಮಾಡಿರುವ ರಾಹುಲ್ ಗಾಂಧಿಗೆ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ನೋಟಿಸ್ ನೀಡಿದ್ದಾರೆ.
“ಶಕುನ್ ರಾಣಿ ಅವರು ಒಮ್ಮೆ ಮಾತ್ರ ಮತ ಚಲಾಯಿಸಿದ್ದಾರೆ. ರಾಹುಲ್ ಗಾಂಧಿ ಟಿಕ್-ಮಾರ್ಕ್ ಮಾಡಿ ತೋರಿಸಿರುವ ದಾಖಲೆಯು ಮತಗಟ್ಟೆ ಅಧಿಕಾರಿಯದ್ದಲ್ಲ” ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಪೇಪರ್ ಬಂಡಲ್ ತೋರಿಸಿ ಆರೋಪಿಸಿರುವ “ಹಿಟ್ ಅಂಡ್ ರನ್” ರಾಹುಲ್ ಗಾಂಧಿಗೆ ಸ್ಪಷ್ಟ ಪುರಾವೆಯನ್ನು ಒದಗಿಸುವಂತೆ ನೋಟಿಸ್ ಜಾರಿ ಮಾಡಿದೆ ಎಂದು ಜೆಡಿಎಸ್ ತಿಳಿಸಿದೆ.

