ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಥಳೀಯರೊಂದಿಗೆ ಸಮಾಲೋಚಿಸದೆ, ಪರಿಸರದ ಮೇಲಿನ ಪರಿಣಾಮಗಳ ಕುರಿತು ಅಧ್ಯಯನ ನಡೆಸದೆ ಆಳಸಮುದ್ರದ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾನು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಗಣಿಗಾರಿಕೆ ಪರಿಣಾಮಗಳ ಬಗ್ಗೆ ಯೋಚಿಸದೆ ಖಾಸಗಿ ಕಂಪನಿಗಳಿಗೆ ಗಣಿಗಾರಿಕೆ ಮಾಡಲು ಅನುಮತಿಸುವುದು ಕಡಲ ಜೀವಗಳಿಗೆ ಅಪಾಯನ್ನುಂಟು ಮಾಡುವ ಸಾಧ್ಯತೆಯಿದೆ.
ಲಕ್ಷಾಂತರ ಮೀನುಗಾರರ ಜೀವನೋಪಾಯದ ಮೇಲೆ ಇದು ಪರಿಣಾಮ ಬೀರಲಿದೆ. ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ಆಗ್ರಹ ಮಾಡಿದ್ದಾರೆ.