ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಗೆ ಶೀಘ್ರದಲ್ಲೇ ರಾಹುಲ್ ಗಾಂಧಿ ಚಾಲನೆ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಯೋಜನೆಗೆ ಶೀಘ್ರದಲ್ಲೇ ರಾಹುಲ್ ಗಾಂಧಿ ಅವರಿಂದ ಚಾಲನೆ! ಸಿಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಭರವಸೆ ನೀಡಿದರು.

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಲೋಕಸಭೆಯ ಪ್ರತಿಪಕ್ಷ ನಾಯಕ ಶ್ರೀ ರಾಹುಲ್ ಗಾಂಧಿ ಅವರ ದೃಷ್ಟಿಕೋನದಿಂದ ಮೂಡಿ ಬಂದಿದೆ. ಈ ಯೋಜನೆಯ ಮೊದಲ ಹಂತವಾಗಿ 158 ಎಕರೆ ಭೂ ಸ್ವಾಧೀನ ಈಗಾಗಲೇ ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದರು.

- Advertisement - 

ಮುಂದಿನ ಹಂತದಲ್ಲಿ ಸುಮಾರು 400 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲೇ ಶ್ರೀ ರಾಹುಲ್ ಗಾಂಧಿ ಅವರು ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

 

- Advertisement - 

Share This Article
error: Content is protected !!
";