ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೇ.60 ಪರ್ಸೆಂಟ್ ಕಾಂಗ್ರೆಸ್ ಸರ್ಕಾರ ಇಡೇ ದೇಶದಲ್ಲೇ ಭ್ರಷ್ಟಾಚಾರದಲ್ಲಿ ನಂಬರ್‌ಒನ್! ಎಂದು ಜೆಡಿಎಸ್ ಆರೋಪಿಸಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರ “ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್” ಆಗಿದೆ ಎಂಬ ಸತ್ಯವನ್ನು ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ , ಯಲಬುರ್ಗಾ ಕ್ಷೇತ್ರದ ಕಾಂಗ್ರೆಸ್‌ಶಾಸಕ ಬಸವರಾಜ ರಾಯರಡ್ಡಿ ಅವರೇ ಒಪ್ಪಿಕೊಂಡಿದ್ದಾರೆ.
ಪ್ರತಿಯೊಂದರಲ್ಲೂ 60% ಕಮಿಷನ್‌ಲೂಟಿ ಹೊಡೆದು ರಾಜ್ಯವನ್ನು ದಿವಾಳಿ ಮಾಡುತ್ತಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದುರಾಡಳಿತಕ್ಕೆ ಹೇಳಿಕೆಯೇ ಪುಷ್ಟೀಕರಿಸಿದೆ ಎಂದು ಜೆಡಿಎಸ್ ದೂರಿದೆ.
ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಭ್ರಷ್ಟಾಚಾರ ಅತೀ ಹೆಚ್ಚು ತಾಂಡವಾಡುತ್ತಿದೆ ಎಂಬುದನ್ನು ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಇರುತ್ತದೆ ಎಂದು ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದಿನಬೆಳಗಾದರೆ ಒಂದೊಂದು ಹಗರಣಗಳು, ವಾಲ್ಮೀಕಿ ಹಗರಣ, ಮುಡಾ ಹಗರಣ, ಸ್ಮಾರ್ಟ್‌ಮೀಟರ್‌ಟೆಂಡರ್ ಹಗರಣ, ವರ್ಗಾವಣೆ ದಂಧೆ, ಸಚಿವರ ಭ್ರಷ್ಟಾಚಾರಕ್ಕೆ ಆಡಿಯೋ ಸಾಕ್ಷಿಗಳು…, ಕಾಂಗ್ರೆಸ್‌ಸರ್ಕಾರದ ಭ್ರಷ್ಟಾಚಾರಗಳನ್ನು ಬೆತ್ತಲುಗೊಳಿಸುತ್ತಲೇ ಇದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.