ಬಿಸಿಲಿನ ಬೇಗೆಗೆ ಬಸವಳಿದ ಧರೆಗೆ ಮಳೆಯ ಸಿಂಚನ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೇಸಿಗೆ ಬಿಸಿಲಿಗೆ ತಂಪಾಗಿ
  ಧರೆಗೆ ಇಳಿದ  ವರ್ಷಧಾರೆ ಜನರಿಗೆ ಮಳೆಯ ತಂಪು ಎರೆದಿದೆ. ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ ಶನಿವಾರ ವರ್ಷದ ಮೊದಲ ಮಳೆ ಸುರಿದಿದೆ. ವರ್ಷದ ಮೊದಲ ಮಳೆ ಆಗಮನಕ್ಕೆ ಜನರು ಸಂತಸ ವ್ಯಕ್ತ ಪಡಿಸಿದ್ದಾರೆ.  ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆಯ ತಂಪು ಸಿಕ್ಕಂತಾಗಿದೆ.

ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ. ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅದಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಆರಂಭ ಪಡೆದುಕೊಳ್ಳುವ ಸಾಧ್ಯತೆ ಇದ್ದು, ರೈತರು ಖುಷಿಯಾಗಿದ್ದಾರೆ. ಮಾರ್ಚ್ ಕೊನೆಯ ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು ಯುಗಾದಿ ಮುನ್ನವೇ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿರಲಿದೆ.

 

 

 

- Advertisement -  - Advertisement - 
Share This Article
error: Content is protected !!
";