Ad imageAd image

ಕಾಂಗ್ರೆಸ್‌ನಾಯಕರಿಂದ ರಾಜಭವನ ಚಲೋ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ತುರ್ತಾಗಿ ಅನುಮತಿ ನೀಡಿದಂತೆ
, ರಾಜ್ಯಪಾಲರು ತಮ್ಮ ಮುಂದೆ ಬಾಕಿ ಇರುವ ಇತರ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್‌ನಾಯಕರು ರಾಜಭವನ ಚಲೋನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿದ ಕಾಂಗ್ರೆಸ್‌ನಾಯಕರು, ರಾಜ್ಯಪಾಲ ಥಾವರ್‌ಚಂದ್‌ಗೆಹ್ಲೋಟ್‌ಅವರನ್ನು ಭೇಟಿಯಾದರು.

ಅದಕ್ಕೂ ಮೊದಲು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಂಪುಟದ ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನಪರಿಷತ್‌ಸದಸ್ಯರು ಮತ್ತು ಮಾಜಿ ಸಂಸದ ವೀರಪ್ಪ ಮೊಯ್ಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವಂತೆ ಕಾಂಗ್ರೆಸ್‌ನಾಯಕರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆಎಂದು ವರದಿಯಾಗಿದೆ.

 

 

 

 

- Advertisement -  - Advertisement - 
Share This Article
error: Content is protected !!
";