ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬ್ರರಿಂಗ್ನಾನ್ ಎಂಬ ಗ್ರಾಮದಲ್ಲಿನ ಐತಿಹಾಸಿಕ ಉಮಾ ಭಗವತಿ ಮಂದಿರದಲ್ಲಿ 34 ವರ್ಷಗಳ ಬಳಿಕ ಈ ವರ್ಷ ರಾಮನವಮಿಯನ್ನು ಆಚರಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಬಳಿಕ ಕಾಶ್ಮೀರ ಸಂಪೂರ್ಣವಾಗಿ ಬದಲಾಗಿದೆ. ರಾಜಕೀಯ ಪ್ರೇರಿತ ಗಲಭೆಗಳು ನಿಯಂತ್ರಣಕ್ಕೆ ಬಂದಿದೆ. ಅಭಿವೃದ್ಧಿಯ ಮುಖ್ಯವಾಹಿನಿಗೆ ಜಮ್ಮು-ಕಾಶ್ಮೀರ ಬೆಸೆದುಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಕಠಿಣ ನಿಲುವುಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ.
ಭದ್ರತಾ ಪಡೆಗಳು ಮತ್ತು ಸರ್ಕಾರದ ಪ್ರಯತ್ನಗಳಿಂದಾಗಿ ಪರಿಸ್ಥಿತಿ ಸುಧಾರಿಸಿದ್ದು, ಜನರಲ್ಲಿ ಶಾಂತಿ ಮತ್ತು ವಿಶ್ವಾಸ ಮರಳಿ ಬಂದಿದೆ. ಇದು ಜಮ್ಮು-ಕಾಶ್ಮೀರದಲ್ಲಿ ಶಾಂತಿ, ಸೌಹಾರ್ದ ಮತ್ತು ಸಹಬಾಳ್ವೆಯ ಪುನಃಸ್ಥಾಪನೆಯ ಸಂಕೇತವಾಗಿದೆ ಎಂದು ಬಿಜೆಪಿ ತಿಳಿಸಿದೆ.