ಶಾಸಕರ ಅಹವಾಲು ಕೇಳಲಿರುವ ರಣದೀಪ್ ಸಿಂಗ್ ಸುರ್ಜೇವಾಲಾ 

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಬಗ್ಗೆ ಊಹಾಪೋಹಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರು ಧ್ವನಿ ಎತ್ತಿದ್ದು ಶಾಸಕರೊಟ್ಟಿಗೆ ಮಾತನಾಡಿ ಅಸಮಾಧಾನದ ಕಿಚ್ಚು ತಗ್ಗಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮೂರು ದಿನಗಳ ಕಾಲ ರಾಜ್ಯ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿ ಶಾಸಕರ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸಲಿದ್ದಾರೆ.

ಸುರ್ಜೇವಾಲಾ ಅವರು ಶಾಸಕರ ಮನಸ್ಥಿತಿ, ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಪಕ್ಷದ ಹೈಕಮಾಂಡ್‌ಗೆ ವರದಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.

- Advertisement - 

ಸರ್ಕಾರ ಮತ್ತು ಸಚಿವರ ಕಾರ್ಯಕ್ಷಮತೆ ಮೌಲ್ಯಮಾಪನ ಮಾಡಲು ಈ ಚರ್ಚೆ ನಿರ್ಣಾಯಕವಾಗಿದೆ. ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಸಚಿವ ಸಂಪುಟ ಪುನರ್ ರಚಿಸಬೇಕೆ, ಕೆಲ ಸಚಿವರನ್ನು ಕೈ ಬಿಡಬಿಟ್ಟು ಅವಕಾಶ ವಂಚಿತರಿಗೆ ಅವಕಾಶ ನೀಡುವುದು ಸೇರಿದಂತೆ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ತರಬೇಕೆ ಎನ್ನುವ ಕುರಿತು ಸಮಗ್ರವಾಗಿ ವರದಿ ನೀಡುವ ಸಾಧ್ಯತೆ ಇದೆ.

ಸುರ್ಜೇವಾಲಾ 40ಕ್ಕೂ ಹೆಚ್ಚಿನ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಪ್ರತಿಯೊಬ್ಬರೊಂದಿಗೆ ಚರ್ಚಿಸಲಿದ್ದಾರೆ. ಮೂರು ದಿನಗಳ ಅವಧಿಯಲ್ಲಿ ಎಲ್ಲಾ 137 ಶಾಸಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ನಿಧಿಯ ಕೊರತೆ ಮತ್ತು ಸಚಿವರ ಅಸಹಕಾರದಂತಹ ವಿಷಯಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

- Advertisement - 

ಸುರ್ಜೇವಾಲಾ ಅವರು ಶಾಸಕರ ಜೊತೆಗೆ, ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಯಸುವ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಇತ್ತೀಚೆಗೆ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡುವ ಮೂಲಕ ವಿವಾದ ಹುಟ್ಟುಹಾಕಿದ ಸಿದ್ದರಾಮಯ್ಯನವರ ಆಪ್ತರಾದ ಹಿರಿಯ ನಾಯಕ ಬಿ.ಆರ್. ಪಾಟೀಲ್ ಅವರೊಂದಿಗೆ ಚರ್ಚೆ ಆರಂಭವಾಗಲಿದೆ. ಪಾಟೀಲ್ ಅವರನ್ನು ಬೆಂಬಲಿಸಿದ, ಶಾಸಕ ರಾಜು ಕಾಗೆ ಅವರು ಸರ್ಕಾರದಿಂದ ಅನುಮೋದಿತ ಅಭಿವೃದ್ಧಿ ಕಾರ್ಯಗಳಿಗೆ ಕೆಲಸದ ಆದೇಶಗಳನ್ನು ನೀಡುವಲ್ಲಿ ವಿಳಂಬವಾಗಿದೆ ಎಂದು ಆರೋಪಿಸಿದರು.
ಹೈಕಮಾಂಡ್‌ ನೀಡಿರುವ ಸೂಚನೆಗಳನ್ನು ಆಧರಿಸಿ ಸಿಎಂ
ಸಿದ್ದರಾಮಯ್ಯ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೇರಿದಂತೆ ಇಬ್ಬರು ಶಾಸಕರನ್ನು ಪ್ರತ್ಯೇಕ ಭೇಟಿ ಮಾಡಿ ಚರ್ಚಿಸಿದ್ದರು.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೆಪ್ಟೆಂಬರ್ ನಂತರ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ನಡೆಯಲಿದೆ ಎಂದು ನೀಡಿದ್ದ ಹೇಳಿಕೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ತಮ್ಮ ತಂದೆಗೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಯಾವುದೇ ಸೂಚನೆ ನೀಡಿಲ್ಲ ಮತ್ತು ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಮುಂದುವರಿಯುತ್ತಾರೆ ಎಂದು ಹೇಳಿದ್ದಾರೆ.

ಇತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಎರಡೂವರೆ ವರ್ಷಗಳ ನಂತರ, ಇನ್ನೂ ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಒಪ್ಪಂದವಾಗಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಿಸಬೇಕು ಮತ್ತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ.

ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ನಿಧಿಯ ಕುರಿತು ಮತ್ತು ಸರ್ಕಾರ ಮತ್ತು ಸಚಿವರ ಬಗ್ಗೆ ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸುರ್ಜೇವಾಲಾ ಅವರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ. ಆದಾಗ್ಯೂ, ರಾಜ್ಯವನ್ನು ಬೇರೆ ಯಾವುದೇ ನಾಯಕರು ನಿರ್ವಹಿಸಲು ಸಾಧ್ಯವಿಲ್ಲದ ಕಾರಣ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಬಯಸುವುದಾಗಿ ಹಿರಿಯ ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುರ್ಜೆವಾಲ ಅವರು ಶಾಸಕರ ಅಭಿಪ್ರಾಯ ಸಂಗ್ರಹದ ನಂತರ ಮತ್ತು ಮುಂದಿನ ಮೂರು ತಿಂಗಳ ನಂತರ ರಾಜಕೀಯದಲ್ಲಿ ಬದಲಾವಣೆ ಆಗುತ್ತಾ ಎನ್ನುವುದನ್ನು ಕಾಲ ನಿರ್ಧರಿಸಲಿದೆ.

 

 

 

Share This Article
error: Content is protected !!
";